ಸೂಗೂರಿನಲ್ಲಿ ಬೃಹತ್ ರಕ್ತದಾನ ಶಿಬಿರ: ಸಚಿವ ಕೆ.ಎಸ್.ಈಶ್ವರಪ್ಪ ಚಾಲನೆ - blood donation camp
🎬 Watch Now: Feature Video
ಶಿವಮೊಗ್ಗ ತಾಲೂಕಿನ ಸೂಗೂರು ಗ್ರಾಮದಲ್ಲಿ ಬಿಜೆಪಿ ವತಿಯಿಂದ ರಕ್ತದಾನ ಶಿಬಿರ ಆಯೋಜಿಸಲಾಗಿತ್ತು. ಶಿಬಿರಕ್ಕೆ ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಸ್.ಈಶ್ವರಪ್ಪ ಚಾಲನೆ ನೀಡಿದರು. ನಂತರ ಮಾತನಾಡಿದ ಅವರು, ಈ ರಕ್ತದಾನ ಶಿಬಿರದಲ್ಲಿ ಕನಿಷ್ಠ 500 ಯೂನಿಟ್ ರಕ್ತ ಸಂಗ್ರಹಣೆ ಮಾಡುವ ಉದ್ದೇಶವಿದೆ. ದಾನಗಳಲ್ಲಿ ಶ್ರೇಷ್ಠದಾನ ರಕ್ತದಾನ. ಆದ್ದರಿಂದ ರಕ್ತದಾನ ಮಾಡಿ ಜೀವ ಉಳಿಸಿ ಎಂದು ಅವರು ಸಾರ್ವಜನಿಕರಲ್ಲಿ ಮನವಿ ಮಾಡಿದರು.