ಅಪಘಾತಕ್ಕೊಳಗಾದ ಪ್ರಯಾಣಿಕರನ್ನು ಆಸ್ಪತ್ರೆಗೆ ಸೇರಿಸಿ ಮಾನವೀಯತೆ ಮೆರೆದ ಸಚಿವ
🎬 Watch Now: Feature Video
ಹಾಸನ ಜಿಲ್ಲಾ ಪ್ರವಾಸದಲ್ಲಿರುವ ಜಿಲ್ಲಾ ಉಸ್ತುವಾರಿ ಹಾಗೂ ಆಹಾರ ಮತ್ತು ನಾಗರಿಕ ಸರಬರಾಜು ಸಚಿವರಾದ ಕೆ.ಗೋಪಾಲಯ್ಯ, ಅಪಘಾತಕ್ಕೀಡಾದ ವಾಹನದಲ್ಲಿದ್ದ ಪ್ರಯಾಣಿಕರನ್ನು ಆಸ್ಪತ್ರೆಗೆ ಸೇರಿಸಿ ಮಾನವೀಯತೆ ಮಾಡಿದ್ದಾರೆ. ಬೆಂಗಳೂರಿನಿಂದ ತೀರ್ಥಹಳ್ಳಿಗೆ ಹೋಗುತ್ತಿದ್ದ ಪ್ರಯಾಣಿಕರ ವಾಹನವೊಂದು ಚನ್ನರಾಯಪಟ್ಟಣ ತಾಲೂಕಿನ ಸೋಮಾರ ಸಂತೆಯ ಮಾರ್ಗ ಮಧ್ಯೆ ಅಪಘಾತಕ್ಕೀಡಾಗಿತ್ತು. ಈ ವೇಳೆ ಇದನ್ನು ನೋಡಿದ ಸಚಿವರು, ತಕ್ಷಣ ತಮ್ಮ ವಾಹನವನ್ನು ನಿಲ್ಲಿಸಿ ಗಾಯಾಳುಗಳನ್ನು ಹತ್ತಿರದ ಚನ್ನರಾಯಪಟ್ಟಣದ ಆಸ್ಪತ್ರೆಗೆ ದಾಖಲಿಸಿದ್ದಾರೆ. ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಿ ನಂತರ ಅವರಿಗೆ ತೀರ್ಥಹಳ್ಳಿಗೆ ಹೋಗುವುದಕ್ಕೆ ಬದಲಿ ವಾಹನದ ವ್ಯವಸ್ಥೆ ಮಾಡಿಕೊಟ್ಟಿದ್ದಾರೆ. ಈ ಮೂಲಕ ಸಚಿವ ಕೆ.ಗೋಪಾಲಯ್ಯ ಮಾನವೀಯತೆ ಮೆರೆದಿದ್ದಾರೆ.