ಸಚಿವ ಮಾಧುಸ್ವಾಮಿ ನೇತೃತ್ವದಲ್ಲಿ ಸಭೆ: ಸಾಮಾಜಿಕ ಅಂತರ ಮರೆತ ಅಧಿಕಾರಿಗಳು
🎬 Watch Now: Feature Video
ತುಮಕೂರು: ಕೊರೊನಾ ಭೀತಿ ಹಿನ್ನೆಲೆಯಲ್ಲಿ ಈಗಾಗಲೇ ಎಲ್ಲೆಡೆ ಸಾಮಾಜಿಕ ಅಂತರ ಕಾಯ್ದುಕೊಳ್ಳಲಾಗುತ್ತಿದೆ. ಆದರೆ ಇಂದು ಜಿಲ್ಲಾಧಿಕಾರಿ ಕಚೇರಿಯಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಜೆ.ಸಿ. ಮಾಧುಸ್ವಾಮಿ ನೇತೃತ್ವದಲ್ಲಿ ನಡೆದ ಅಧಿಕಾರಿಗಳ ಸಭೆಯಲ್ಲಿ ಯಾವುದೇ ಸಾಮಾಜಿಕ ಅಂತರವನ್ನು ಪಾಲನೆ ಮಾಡಿಲ್ಲ ಎಂಬ ಆರೋಪಗಳು ಕೇಳಿ ಬಂದಿವೆ. ಇನ್ನು ಈ ಸಭೆಯಲ್ಲಿ ಡಿಸಿ, ಎಸ್ಪಿ ಸೇರಿದಂತೆ ಜಿಲ್ಲೆಯ ಶಾಸಕರು ಹಾಗೂ ವಿವಿಧ ಇಲಾಖೆ ಅಧಿಕಾರಿಗಳು ಭಾಗಿಯಾಗಿದ್ದರು.