ರಮೇಶ್ ಜಾರಕಿಹೊಳಿ ತಪ್ಪು ಮಾಡಿಲ್ಲ: ಸಚಿವ ಮುರುಗೇಶ್ ನಿರಾಣಿ - Bangalore
🎬 Watch Now: Feature Video
ಬೆಂಗಳೂರು: ರಮೇಶ್ ಜಾರಕಿಹೊಳಿ ತಪ್ಪು ಮಾಡಿಲ್ಲ ಎಂದು ವೈಯಕ್ತಿಕವಾಗಿ ಅನಿಸುತ್ತಿದೆ ಎಂದು ಗಣಿ ಮತ್ತು ಭೂ ವಿಜ್ಞಾನ ಸಚಿವ ಮುರುಗೇಶ್ ನಿರಾಣಿ ಹೇಳಿದರು. ವಿಕಾಸ ಸೌಧದಲ್ಲಿ ಇಂದು ಮಾಧ್ಯಮದವರ ಜೊತೆ ಮಾತನಾಡಿದ ಅವರು, ಸಿಡಿ ಪ್ರಕರಣವನ್ನು ಗೃಹ ಸಚಿವರು ಎಸ್ಐಟಿ ತನಿಖೆಗೆ ವಹಿಸಿ ಉತ್ತಮ ಕೆಲಸ ಮಾಡಿದ್ದಾರೆ. ತನಿಖಾ ವರದಿ ಬರುವವರೆಗೆ ಬಿಜೆಪಿ ಮತ್ತು ಕಾಂಗ್ರೆಸ್ ಪ್ರಮುಖರು ಸಂಯಮ ವಹಿಸುವುದು ಸೂಕ್ತ. ತನಿಖೆಯಿಂದ ಸತ್ಯಾಸತ್ಯತೆ ಹೊರಬರಲಿದೆ. ದಯವಿಟ್ಟು ಮನೆಗಳಲ್ಲಿ ಮಕ್ಕಳು, ಮಹಿಳೆಯರು ಇರುತ್ತಾರೆ. ಮಾಧ್ಯಮಗಳಲ್ಲಿ ಒಳ್ಳೆಯ ಕಾರ್ಯಕ್ರಮಗಳನ್ನು ತೋರಿಸಿ ಎಂದು ನಿರಾಣಿ ಕೈಮುಗಿದು ಮನವಿ ಮಾಡಿದರು.