ಮೇಲುಕೋಟೆ ಚಲುವನಾರಾಯಣಸ್ವಾಮಿಗೆ ಸಚಿವ ನಾರಾಯಣ್ ಗೌಡ ವಿಶೇಷ ಪೂಜೆ - Minister Narayan Gowda Pooja to Chaluvanarayanaswamy
🎬 Watch Now: Feature Video
ಮಂಡ್ಯ : ಇಂದು ರಥಸಪ್ತಮಿ ಹಿನ್ನೆಲೆ ಮೇಲುಕೋಟೆ ಚಲುವನಾರಾಯಣಸ್ವಾಮಿಗೆ ಕುಟುಂಬ ಸಮೇತರಾಗಿ ಸಚಿವ ಡಾ.ಕೆ ಸಿ ನಾರಾಯಣ್ ಗೌಡ ವಿಶೇಷ ಪೂಜೆ ಸಲ್ಲಿಸಿದರು. ಮಂಡ್ಯ ಜಿಲ್ಲೆ ಪಾಂಡವಪುರ ತಾಲೂಕಿನ ಮೇಲುಕೋಟೆ ಚಲುವನಾರಾಯಣಸ್ವಾಮಿ ದೇವಾಲಯಕ್ಕೆ ಭೇಟಿ ಕೊಟ್ಟ ಸಚಿವರು, ವಿಶೇಷ ಪೂಜೆ ಸಲ್ಲಿಸಿ ದೇವರ ಆಶೀರ್ವಾದ ಪಡೆದರು. ಬಳಿಕ ದೇವಸ್ಥಾನದ ಆವರಣದಲ್ಲಿ ಅಂತಾರಾಜ್ಯ ಮಟ್ಟದ ಜಾನಪದ ಕಲಾಮೇಳಕ್ಕೆ ಚಾಲನೆ ನೀಡಿದರು. ಸಂಪ್ರದಾಯದಂತೆ ರಥಸಪ್ತಮಿ ಪೂಜೆ ಸಲ್ಲಿಸಿದರು. ವಿವಿಧ ಜಾನಪದ ಕಲಾ ತಂಡಗಳಿಂದ ಕಲಾಮೇಳದ ಪ್ರದರ್ಶನಕ್ಕೆ ಚಾಲನೆ ನೀಡಿದರು. ಉತ್ಸವ ಮೂರ್ತಿಗೆ ಪೂಜೆ ಸಲ್ಲಿಸಿದರು.