ಶಾಲೆಗೆ ಬಂದ ವಿದ್ಯಾರ್ಥಿಗಳಿಗೆ ಹೂ, ಸಿಹಿ ನೀಡಿ ಸ್ವಾಗತಿಸಿದ ಸಚಿವ ಪ್ರಭು ಚವ್ಹಾಣ್ - ವಿದ್ಯಾರ್ಥಿಗಳಿಗೆ ಮಾಸ್ಕ್, ಸ್ಯಾನಿಟೈಸರ್ ನೀಡಿದ ಸಚಿವ ಪ್ರಭು ಚವ್ಹಾಣ್
🎬 Watch Now: Feature Video
ಬೀದರ್: ಕೊರೊನಾ ಭೀತಿಯಿಂದ ಬಂದ್ ಆಗಿದ್ದ ಶಾಲೆಗಳು 10 ತಿಂಗಳ ನಂತರ ಇದೀಗ ಆರಂಭವಾಗಿವೆ. ಬೀದರ್ ಜಿಲ್ಲೆಯಲ್ಲೂ ಶಾಲೆಗಳು ಆರಂಭಗೊಂಡಿದ್ದು, ವಿದ್ಯಾರ್ಥಿಗಳು ಸಂತಸದಿಂದ ಶಾಲೆಗೆ ಆಗಮಿಸುತ್ತಿದ್ದಾರೆ. ಬೆಳಗ್ಗೆಯಿಂದಲೂ ಶಿಕ್ಷಕರು ಮಕ್ಕಳಿಗೆ ಥರ್ಮಲ್ ಸ್ಕ್ರೀನಿಂಗ್ ಮೂಲಕ ಆರೋಗ್ಯ ತಪಾಸಣೆ ಮಾಡಿ ಮಾಸ್ಕ್, ಸ್ಯಾನಿಟೈಸರ್ ನೀಡಿ ಸಾಮಾಜಿಕ ಅಂತರ ಕಾಪಾಡಿಕೊಂಡು ಶಾಲೆಯಲ್ಲಿ ತರಗತಿಗಳನ್ನು ಆರಂಭಿಸಿದ್ದಾರೆ. ಜಿಲ್ಲೆಯ ಔರಾದ್ ತಾಲೂಕಿನ ಹೊಕ್ರಾಣ ಸರ್ಕಾರಿ ಶಾಲೆಗೆ ಪಶು ಸಂಗೋಪನಾ ಸಚಿವ ಪ್ರಭು ಚವ್ಹಾಣ್ ಭೇಟಿ ನೀಡಿ, ವಿದ್ಯಾರ್ಥಿಗಳಿಗೆ ಹೂ ನೀಡಿ, ಸಿಹಿ ಹಂಚಿ, ಮಾಸ್ಕ್, ಸ್ಯಾನಿಟೈಸರ್ ವಿತರಿಸಿ ಸಾಮಾಜಿಕ ಅಂತರ ಕಾಪಾಡಿಕೊಂಡು ಶಾಲೆಗೆ ಬರುವಂತೆ ತಿಳಿಸಿದರು.