ಆರೋಗ್ಯದ ದೃಷ್ಟಿಯಿಂದ ಎಲ್ಲರೂ ಲಸಿಕೆ ಹಾಕಿಸಿಕೊಳ್ಳಿ: ಸಚಿವ ಸೋಮಣ್ಣ ಮನವಿ
🎬 Watch Now: Feature Video
ಬೆಂಗಳೂರು: ರಾಜ್ಯಾದ್ಯಂತ ಹಿರಿಯ ನಾಗರಿಕರಿಗೆ ಕೋವಿಡ್ ಲಸಿಕೆ ಹಾಕಲಾಗುತ್ತಿದ್ದು, ಇಂದು ಸಚಿವ ವಿ ಸೋಮಣ್ಣ ನಗರದ ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಲಸಿಕೆ ಹಾಕಿಸಿಕೊಂಡರು. ಲಸಿಕೆ ಹಾಕಿಸಿಕೊಂಡ ನಂತರ ಮಾತಾನಾಡಿದ ಅವರು, ಇಡೀ ಭಾರತದ ಮೂಲೆಮೂಲೆಯಲ್ಲಿ ಲಸಿಕಾ ಅಭಿಯಾನ ನಡೆಯುತ್ತಿದ್ದು, 70ನೇ ವರ್ಷಕ್ಕೆ ಕಾಲಿಡುತ್ತಿರುವ ನಾನು ಇಂದು ಲಸಿಕೆ ಹಾಕಿಸಿಕೊಂಡಿದ್ದೇನೆ ಎಂದರು. ಆರೋಗ್ಯದ ದೃಷ್ಟಿಯಿಂದ ಎಲ್ಲ ಹಿರಿಯ ನಾಗರಿಕರು ಲಸಿಕೆ ಹಾಕಿಸಿಕೊಳ್ಳಬೇಕು. ಮುಂದಿನ ಯುವ ಪೀಳಿಗೆಯನ್ನ ರಕ್ಷಣೆ ಮಾಡುವ ಮೂಲಕ ಆರೋಗ್ಯ ಕಾಪಾಡಿಕೊಳ್ಳುವುದು ನಮ್ಮ ಆದ್ಯ ಕರ್ತವ್ಯ ವಾಗಿದೆ. ಹೀಗಾಗಿ, ಪ್ರತಿಯೊಬ್ಬರು ಯಾವುದೇ ಮುಜುಗರ ಇಲ್ಲದೇ, ತಮ್ಮತಮ್ಮ ಆರೋಗ್ಯ ಕಾಪಾಡಿಕೊಳ್ಳಲು ಲಸಿಕೆಯನ್ನ ಪಡೆದುಕೊಳ್ಳಬೇಕು ಅಂತ ಮನವಿ ಮಾಡಿದರು.