ಉಪ್ಪು ತಿಂದವರು ನೀರು ಕುಡಿಯಲಿ: ಬಾಂಬರ್ ಆದಿತ್ಯ ಕುರಿತು ಸುರೇಶಕುಮಾರ್ ಪ್ರತಿಕ್ರಿಯೆ! - ಹೆಚ್ಡಿ ಕುಮಾರಸ್ವಾಮಿ ಬಗ್ಗೆ ಸುರೇಶ್ ಕುಮಾರ್ ಪ್ರತಿಕ್ರಿಯೆ ಸುದ್ದಿ
🎬 Watch Now: Feature Video

ಭಯೋತ್ಪಾದನಾ ಚಟುವಟಿಕೆ ಯಾರೇ ನಡೆಸಿದರೂ ಸರ್ಕಾರ ನಿರ್ದಾಕ್ಷಿಣ್ಯ ಕ್ರಮ ತೆಗೆದುಕೊಳ್ಳಲಿದ್ದು, ಉಪ್ಪು ತಿಂದವರು ನೀರು ಕುಡಿಯಲೇ ಬೇಕೆಂದು ಶಿಕ್ಷಣ ಸಚಿವ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಸುರೇಶ್ ಕುಮಾರ್ ಪ್ರತಿಕ್ರಿಯಿಸಿದರು. ಚಾಮರಾಜನಗರದಲ್ಲಿ ಮಲೆಮಹದೇಶ್ವರ ಬೆಟ್ಟದಲ್ಲಿ ವಿವಿಧ ಅಭಿವೃದ್ಧಿ ಕಾಮಗಾರಿಗಳ ಕುರಿತು ಚರ್ಚೆ ನಡೆಸಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಭಯೋತ್ಪಾದನೆ ಯಾವುದೇ ಸಮುದಾಯಕ್ಕೆ ಸೇರಿದ್ದಲ್ಲ, ಉಗ್ರವಾದವೇ ಒಂದು ಸಮುದಾಯ, ಅದನ್ನು ನಾವು ವಿರೋಧಿಸಬೇಕು ಎಂದು ಅಭಿಪ್ರಾಯಪಟ್ಟರು. ಉಗ್ರವಾದವನ್ನು ರಾಜಕೀಯ ಮಾಡ್ಕೊಂಡು, ಓಟ್ ಬ್ಯಾಂಕ್ ಮಾಡಿಕೊಂಡು ಕೂರುವ ಸಮಯವಲ್ಲ. ಇದರಲ್ಲಿ ರಾಜಕೀಯ ಬೇಳೆ ಬೇಯಿಸಿಕೊಳ್ಳವುದು ಬೇಡ. ಮಾಜಿ ಸಿಎಂ ಎಚ್.ಡಿ.ಕುಮಾರಸ್ವಾಮಿ ಮುಖ್ಯಮಂತ್ರಿಯಾಗಿದ್ದ ಕಾಲದಲ್ಲಿದ್ದ ಪೊಲೀಸರೇ ಈಗಲೂ ಇದ್ದಾರೆ.ಒಬ್ಬ ಮಾಜಿ ಮುಖ್ಯಮಂತ್ರಿ ಈ ರೀತಿ ಪೊಲೀಸ್ ಪಡೆಯ ನೈತಿಕ ಸ್ಥೈರ್ಯವನ್ನ ಕುಂದಿಸುವುದು ಸರಿಯಲ್ಲ ಎಂದು ಮಂಗಳೂರು ಬಾಂಬ್ ಪ್ರಕರಣದ ಬಗ್ಗೆ ವಿಪಕ್ಷಗಳ ಹೇಳಿಕೆಗೆ ತಿರುಗೇಟು ನೀಡಿದರು. ರಾಷ್ಟ್ರ ಮಟ್ಟದಲ್ಲಿ ಕರ್ನಾಟಕ ಪೊಲೀಸರ ದಕ್ಷತೆಗೆ ಹೆಸರಿದ್ದು, ಅವರ ನೈತಿಕ ಸ್ಥೈರ್ಯಕ್ಕೆ ಯಾರೂ ಧಕ್ಕೆ ತರಬಾರದೆಂದರು.