ಕಾಣೆಯಾಗಿದ್ದ ವಿದ್ಯಾರ್ಥಿನಿ ಬಾವಿಯಲ್ಲಿ ಶವವಾಗಿ ಪತ್ತೆ! - Missing student deadbody found in a well

🎬 Watch Now: Feature Video

thumbnail

By

Published : Sep 25, 2019, 12:29 PM IST

ಶಿವಮೊಗ್ಗ: ಮನೆಯಿಂದ ಕಾಣೆಯಾಗಿದ್ದ ವಿದ್ಯಾರ್ಥಿನಿ ಮನೆ ಮುಂದಿನ ಬಾವಿಯಲ್ಲಿ ಶವವಾಗಿ ಪತ್ತೆಯಾಗಿದ್ದು, ಸಾವಿನ ಬಗ್ಗೆ ಸಾಕಷ್ಟು ಅನುಮಾನ ಮೂಡಿದೆ. ಹೊಸನಗರ ತಾಲೂಕು ಮಾದಾಪುರ ಗ್ರಾಮದಲ್ಲಿ ಘಟನೆ ನಡೆದಿದ್ದು, ಈಶ್ವರ್ ಶೇಟ್ ಎಂಬುವರ ಮಗಳು ಪೂಜಾ(17) ಮೃತ ವಿದ್ಯಾರ್ಥಿನಿ. ಈಕೆ ಸೋಮವಾರ ಮನೆಯಿಂದ ಕಾಣೆಯಾಗಿದ್ದಳು. ಈ ಕುರಿತು ಪೂಜಾ ತಂದೆ ರಿಪ್ಪನ್​ಪೇಟೆ ಪೊಲೀಸ್ ಠಾಣೆಯಲ್ಲಿ, ಮಗಳು ಕಾಣೆಯಾಗಿರುವ ಬಗ್ಗೆ ಸೋಮವಾರ ಮಧ್ಯಾಹ್ನವೇ ದೂರು ದಾಖಲಿಸಿದ್ದರು. ರಿಪ್ಪನಪೇಟೆಯಲ್ಲಿ ದ್ವಿತಿಯ ಪಿಯುಸಿ ಓದುತ್ತಿದ್ದಳು. ಪೂಜಾ ಓದಿನಲ್ಲಿ ಪ್ರತಿಭಾನ್ವಿತೆಯಾಗಿದ್ದು, ಆಕೆಯ ಸಾವಿನ ಬಗ್ಗೆ ಗ್ರಾಮಸ್ಥರು ಅನುಮಾನ ವ್ಯಕ್ತಪಡಿಸಿದ್ದಾರೆ. ಘಟನೆ ಕುರಿತು ರಿಪ್ಪನ್​ಪೇಟೆ ಪೊಲೀಸರು ತನಿಖೆ ಪ್ರಾರಂಭಿಸಿದ್ದಾರೆ.

ABOUT THE AUTHOR

author-img

...view details

ETV Bharat Logo

Copyright © 2025 Ushodaya Enterprises Pvt. Ltd., All Rights Reserved.