ಭೂ ಸುಧಾರಣೆ ಕಾಯ್ದೆ ದುರ್ಬಳಕೆ ಆರೋಪ: ದೊಡ್ಡಬಳ್ಳಾಪುರದಲ್ಲಿ ಕಾಂಗ್ರೆಸ್ ಪ್ರತಿಭಟನೆ - ದೊಡ್ಡಬಳ್ಳಾಪುರ ಪ್ರತಿಭಟನೆ
🎬 Watch Now: Feature Video
ರಾಜ್ಯ ಸರ್ಕಾರ ಸುಗ್ರೀವಾಜ್ಞೆ ದುರ್ಬಳಕೆ ಮಾಡಿಕೊಂಡು ಭೂ ಸುಧಾರಣೆ ಕಾಯ್ದೆಗೆ ತಿದ್ದುಪಡಿ ಮಾಡಿದೆ ಎಂದು ಆರೋಪಿಸಿ ದೊಡ್ಡಬಳ್ಳಾಪುರದಲ್ಲಿ ಕಾಂಗ್ರೆಸ್ ನೇತೃತ್ವದಲ್ಲಿ ಬೃಹತ್ ಪ್ರತಿಭಟನೆ ನಡೆಯಿತು. ನಗರದ ತಾಲೂಕು ಕಚೇರಿ ವೃತ್ತದಲ್ಲಿ ಜಮಾಯಿಸಿದ ಕಾರ್ಯಕರ್ತರು ಕೇಂದ್ರ, ರಾಜ್ಯ ಸರ್ಕಾರಗಳ ವಿರುದ್ಧ ಘೋಷಣೆ ಕೂಗಿದರು. ಈ ಕೂಡಲೇ ಭೂ ಸುಧಾರಣೆ ಕಾಯ್ದೆಗೆ ತಿದ್ದುಪಡಿ ಮಾಡಿರೋದನ್ನು ಹಿಂಪಡೆಯಬೇಕೆಂದು ಒತ್ತಾಯಿಸಿದರು. ನಂತರ ಕಾಲ್ನಡಿಗೆ ಮೂಲಕ ತಾಲೂಕು ಕಚೇರಿಗೆ ತೆರಳಿ ತಹಶೀಲ್ದಾರ್ ಮೂಲಕ ಸರ್ಕಾರ ಹಾಗೂ ರಾಜ್ಯಪಾಲರಿಗೆ ಮನವಿಪತ್ರ ನೀಡಿದರು.