ಎಚ್ಡಿಕೆ ರ‍್ಯಾಲಿಗೆ ಕಾಂಗ್ರೆಸ್ ಅಡ್ಡಿ: ಪೊಲೀಸರ ವಿರುದ್ಧ ಹರಿಹಾಯ್ದ ಗೌರಿಶಂಕರ್ - ಮಾಜಿ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ರೋಡ್ ಶೋ
🎬 Watch Now: Feature Video
ತುಮಕೂರು: ಮಾಜಿ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ರೋಡ್ ಶೋ ನಡೆಸುವ ವೇಳೆ ಕಾಂಗ್ರೆಸ್ ಕಾರ್ಯಕರ್ತರು ಬ್ರಹ್ಮಸಂದ್ರ ಗ್ರಾಮದಲ್ಲಿ ಅಡ್ಡಿ ಪಡಿಸುವುದನ್ನು ತಡೆ ಹಿಡಿಯಬಹುದಿತ್ತು. ಆದರೆ, ಪೊಲೀಸರ ನಿರ್ಲಕ್ಷ್ಯವೇ ಸಂಘರ್ಷಕ್ಕೆ ಕಾರಣವಾಗಿದೆ ಎಂದು ತುಮಕೂರು ಗ್ರಾಮಾಂತರ ಶಾಸಕ ಗೌರಿಶಂಕರ್ ಆರೋಪಿಸಿದ್ದಾರೆ. ಈ ಟಿವಿ ಭಾರತ ಜೊತೆ ಮಾತನಾಡಿದ ಅವರು, ಕುಮಾರಸ್ವಾಮಿ ಅವರ ರ‍್ಯಾಲಿ ಈ ಮಾರ್ಗದಲ್ಲಿ ಬರುವುದು ಪೊಲೀಸರಿಗೆ ಮೊದಲೇ ತಿಳಿದಿತ್ತು. ಮುಂಜಾಗ್ರತಾ ಕ್ರಮಗಳನ್ನು ತೆಗೆದುಕೊಳ್ಳಬಹುದಿತ್ತು ಎಂದು ಹೇಳಿದರು.