ಬಿಜೆಪಿಯಿಂದ ತುಮಕೂರು ಜಿಲ್ಲೆಯಲ್ಲಿ ತೃಪ್ತಿಕರ ಕಾರ್ಯಕ್ರಮಗಳ ಅನುಷ್ಠಾನ: ಶಾಸಕ ಜ್ಯೋತಿ ಗಣೇಶ್ - tumakuru latest news
🎬 Watch Now: Feature Video
ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ನೇತೃತ್ವದ ಸರ್ಕಾರ ಅಸ್ತಿತ್ವಕ್ಕೆ ಬಂದ ನಂತರ ತುಮಕೂರು ಜಿಲ್ಲೆಯ ಎಲ್ಲಾ ಪಕ್ಷದ ಶಾಸಕರ ಕ್ಷೇತ್ರಗಳಿಗೆ ತಾರತಮ್ಯವಿಲ್ಲದೆ ಅನುದಾನ ಬಿಡುಗಡೆಯಾಗಿದೆ. ಸರಾಸರಿಯಾಗಿ ಜೆಡಿಎಸ್ ಶಾಸಕರ ಕ್ಷೇತ್ರಗಳಿಗೆ ಸ್ವಲ್ಪ ಮಟ್ಟಿಗೆ ಹೆಚ್ಚಿನ ಅನುದಾನ ಲಭಿಸಿದೆ. ಈ ಹಿಂದಿನ ಸರ್ಕಾರಗಳಲ್ಲಿ ತುಮಕೂರು ಜಿಲ್ಲೆಗೆ ಹೇಮಾವತಿ ನದಿ ನೀರು ಹಂಚಿಕೆಯಲ್ಲಿ ಅನ್ಯಾಯವಾಗುತ್ತಿತ್ತು. ಆದರೆ, ಯಡಿಯೂರಪ್ಪ ಸರ್ಕಾರ ಅಸ್ತಿತ್ವಕ್ಕೆ ಬಂದ ನಂತರ ತುಮಕೂರು ಜಿಲ್ಲೆಗೆ ನೀರಾವರಿ ವಿಷಯದಲ್ಲಿ ತೃಪ್ತಿಕರವಾದ ವ್ಯವಸ್ಥೆ ಕಲ್ಪಿಸಲಾಗಿದೆ ಎಂದು ತುಮಕೂರು ನಗರ ಶಾಸಕ ಜ್ಯೋತಿ ಗಣೇಶ್ ಹೇಳಿದ್ದಾರೆ.