ನನಗೂ ಸಚಿವ ಸ್ಥಾನ ಸಿಗುವ ವಿಶ್ವಾಸವಿದೆ: ಶಾಸಕ ನೆಹರೂ ಓಲೇಕಾರ್
🎬 Watch Now: Feature Video
ಹಾವೇರಿ: ರಾಜ್ಯ ಸರ್ಕಾರ ಒಂದು ವರ್ಷ ಪೂರೈಸುತ್ತಿದೆ. ಈ ಸಂದರ್ಭದಲ್ಲಿ ಸಚಿವ ಸಂಪುಟ ವಿಸ್ತರಣೆಯಾದರೆ ನನಗೂ ಸಚಿವ ಸ್ಥಾನ ಸಿಗುವ ವಿಶ್ವಾಸ ಇದೆ ಎಂದು ಶಾಸಕ ನೆಹರು ಓಲೇಕಾರ್ ಹೇಳಿದ್ದಾರೆ. ನಗರದಲ್ಲಿ ಮಾತನಾಡಿದ ಅವರು, ಈ ಕುರಿತಂತೆ ಈಗಾಗಲೇ ಚರ್ಚೆಯಾಗಿದೆ. ನನಗೆ ಸಚಿವ ಸ್ಥಾನ ನೀಡುವ ಇಂಗಿತವನ್ನು ಹಿರಿಯ ನಾಯಕರು ವ್ಯಕ್ತಪಡಿಸಿದ್ದಾರೆ. ಸಚಿವ ಸಂಪುಟದಲ್ಲಿ ಬಲಗೈ ಸಮುದಾಯದವರಿಗೆ ಪ್ರಾತಿನಿಧ್ಯ ಸಿಕ್ಕಿಲ್ಲ. ಈ ಕುರಿತಂತೆ ನಾನು ಸಿ.ಎಂ.ಯಡಿಯೂರಪ್ಪ ಭೇಟಿ ಮಾಡಿದ್ದೇನೆ. ಅವರು ಸಹ ಗ್ರೀನ್ ಸಿಗ್ನಲ್ ನೀಡಿದ್ದಾರೆ ಎಂದು ತಿಳಿಸಿದ್ದಾರೆ.