ಅನಗತ್ಯವಾಗಿ ಮನೆಯಿಂದ ಹೊರ ಬರದಂತೆ ಶಾಸಕ ರಾಘವೇಂದ್ರ ಹಿಟ್ನಾಳ್ ಮನವಿ - ಕೊರೊನಾ ವೈರಸ್ ನಿಯಂತ್ರಿಸಲು ಕೊಪ್ಪಳದಲ್ಲಿ ಕ್ರಮ
🎬 Watch Now: Feature Video
ಕೊರೊನಾ ಭೀತಿ ಹಿನ್ನೆಲೆ ಮುಂಜಾಗ್ರತಾ ಕ್ರಮವಾಗಿ ಕೊಪ್ಪಳ ನಗರದಲ್ಲಿ ಕೆಮಿಕಲ್ ಸಿಂಪಡಣೆ ಮಾಡಲಾಗುತ್ತಿದೆ. ಜಿಲ್ಲೆಯಲ್ಲಿ ಸುಮಾರು 65ಕ್ಕೂ ಹೆಚ್ಚು ಜನರ ಮೇಲೆ ನಿಗಾ ಇಡಲಾಗಿದೆ. ಜನರು ಯಾರೂ ಮನೆಯಿಂದ ಹೊರ ಬರಬಾರದು ಎಂದು ಕೊಪ್ಪಳ ಶಾಸಕ ಕೆ.ರಾಘವೇಂದ್ರ ಹಿಟ್ನಾಳ್ ಮನವಿ ಮಾಡಿದ್ದಾರೆ. ನಗರದಲ್ಲಿ ಈಟಿವಿ ಭಾರತದೊಂದಿಗೆ ಮಾತನಾಡಿದ ಅವರು, ಕೊರೊನಾ ಕಂಟ್ರೋಲ್ ಮಾಡುವ ನಿಟ್ಟಿನಲ್ಲಿ ಈಗಾಗಲೇ ಜಿಲ್ಲಾ ಉಸ್ತುವಾರಿ ಸಚಿವರು ಸಭೆ ನಡೆಸಿ ಅಗತ್ಯ ಸೂಚನೆಗಳನ್ನು ಜಿಲ್ಲಾಡಳಿತಕ್ಕೆ ನೀಡಿದ್ದಾರೆ. ಅಲ್ಲದೆ ಪರಿಸ್ಥಿತಿ ನಿಭಾಯಿಸಲು ಸಕಲ ರೀತಿಯಲ್ಲಿ ಜಿಲ್ಲಾಡಳಿತ ಹಾಗೂ ಆರೋಗ್ಯ ಇಲಾಖೆ ಸಜ್ಜಾಗಿದೆ. ಆದರೆ, ಜನರು ಮನೆಯಿಂದ ಅನವಶ್ಯಕವಾಗಿ ಹೊರ ಬರಬಾರದು ಎಂದು ಶಾಸಕ ಕೆ. ರಾಘವೇಂದ್ರ ಹಿಟ್ನಾಳ್ ಮನವಿ ಮಾಡಿದ್ದಾರೆ.