ಕಾಂಗ್ರೆಸ್ ಮತ್ತೆ ಅಧಿಕಾರಕ್ಕೆ ಬಂದು ಡಿಕೆಶಿ ಮುಖ್ಯಮಂತ್ರಿಯಾಗಬೇಕು: ಶಾಸಕ ತನ್ವೀರ್ ಸೇಠ್ - ಕಾಂಗ್ರೆಸ್ ಶಾಸಕ ತನ್ವೀರ್ ಸೇಠ್
🎬 Watch Now: Feature Video
ರಾಜ್ಯದಲ್ಲಿ ಮತ್ತೆ ಕಾಂಗ್ರೆಸ್ ಅಧಿಕಾರಕ್ಕೆ ಬರಬೇಕು, ನಮ್ಮ ನಾಯಕತ್ವದಲ್ಲಿ ಡಿಕೆಶಿ ಮುಖ್ಯಮಂತ್ರಿಯಾಗಬೇಕು ಎಂದು ಕಾಂಗ್ರೆಸ್ ಶಾಸಕ ತನ್ವೀರ್ ಸೇಠ್ ಮೈಸೂರಿನಲ್ಲಿ ಹೇಳಿಕೆ ನೀಡಿದ್ದಾರೆ. ಇಂದು ಮೈಸೂರಿಗೆ ಆಗಮಿಸಿದ ಡಿ.ಕೆ.ಶಿವಕುಮಾರ್ ಅವರನ್ನು ಸ್ವಾಗತಿಸಿದ ನಂತರ ಭಾಷಣ ಮಾಡಿದ ಅವರು, ನಮ್ಮಲ್ಲಿ ಒಳ ಜಗಳವಿಲ್ಲ, ನಮ್ಮಲ್ಲಿ ಯಾವುದೇ ನಾಯಕರ ಹಿಂಬಾಲಕರಿಲ್ಲ ಎಂದರು. ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟ ಪಕ್ಷ ನಮ್ಮದು. ಈ ರಾಜ್ಯದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬರಬೇಕು,ನಮ್ಮ ನಾಯಕತ್ವದಲ್ಲಿ ಡಿಕೆಶಿ ಸಿಎಂ ಆಗಬೇಕು ಎಂದರು.