ಬಿಜೆಪಿ ಸಭೆಯಲ್ಲಿ ಏಕಾಂಗಿಯಾಗಿ ಕುಳಿತ ಕತ್ತಿ, ನೋಡಿಯೂ ಮುಂದೆ ಕರೆಯದ ಸಿಎಂ, ಕಟೀಲ್! - ಬಿಜೆಪಿ ಸಭೆಯಲ್ಲಿ ಶಾಸಕ ಉಮೇಶ್ ಕತ್ತಿ ಏಕಾಂಗಿ
🎬 Watch Now: Feature Video

ಹುಬ್ಬಳ್ಳಿ: ನಗರದ ಖಾಸಗಿ ಹೋಟೆಲ್ನಲ್ಲಿ ನಡೆದ ಬಿಜೆಪಿ ಸಭೆಯಲ್ಲಿ ಶಾಸಕ ಉಮೇಶ್ ಕತ್ತಿ ಏಕಾಂಗಿಯಾಗಿದ್ದರು. ಉಪ ಚುನಾವಣೆ ಹಾಗೂ ವಿಧಾನ ಪರಿಷತ್ ಅಭ್ಯರ್ಥಿಗಳ ಆಯ್ಕೆಗಾಗಿ ಬಿಜೆಪಿ ಕರೆದ ಸಭೆಯಲ್ಲಿ ಉಮೇಶ್ ಕತ್ತಿ ಏಕಾಂಗಿಯಾಗಿ ಸಾಮಾನ್ಯ ಕಾರ್ಯಕರ್ತರಂತೆ ಕುಳಿತಿದ್ದು ಕಂಡು ಬಂತು. ವೇದಿಕೆ ಮೇಲಿದ್ದ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಸಭೆಯಲ್ಲಿ ಆಗಮಿಸಿದ್ದ ಸಂಸದರು ಹಾಗೂ ಶಾಸಕರನ್ನು ಕರೆದು ವೇದಿಕೆ ಮುಂಭಾಗದಲ್ಲಿ ಕುಳಿತುಕೊಳ್ಳಲು ಸೂಚನೆ ನೀಡಿದರು. ಆದ್ರೆ ಸಿಎಂ ಯಡಿಯೂರಪ್ಪ ಹಾಗೂ ಕಟೀಲ್, ಕತ್ತಿಯವರನ್ನು ನೋಡಿಯೂ ಮುಂದೆ ಕರೆಯದಿರುವುದು ಸಾಕಷ್ಟು ಕುತೂಹಲ ಮೂಡಿಸಿದೆ.
Last Updated : Oct 26, 2019, 3:31 PM IST