ಮುಖ್ಯಮಂತ್ರಿ ಬದಲಾವಣೆ ಸದ್ಯಕ್ಕಿಲ್ಲ, ಮುಂದೆ ಗೊತ್ತಿಲ್ಲ: ಹೆಚ್.ವಿಶ್ವನಾಥ್ - ಮೈಸೂರು ಜಿಲ್ಲೆ ಸುದ್ದಿ
🎬 Watch Now: Feature Video
ಮೈಸೂರು: ಮುಖ್ಯಮಂತ್ರಿ ಸ್ಥಾನ ಬದಲಾವಣೆ ಸದ್ಯಕ್ಕೆ ಇಲ್ಲ. ಮುಂದೆ ಗೊತ್ತಿಲ್ಲ ಎಂದು ವಿಧಾನ ಪರಿಷತ್ ಸದಸ್ಯ ಹೆಚ್.ವಿಶ್ವನಾಥ್ ಹೇಳಿದರು. ಈಟಿವಿ ಭಾರತ್ನೊಂದಿಗೆ ಮಾತನಾಡಿದ ಅವರು, ಸಚಿವ ಸಂಪುಟ ವಿಸ್ತರಣೆಯಲ್ಲಿ ಯಾವುದೇ ಗೊಂದಲ ಇಲ್ಲ. ರಾಜೀನಾಮೆ ಕೊಟ್ಟು ಗೆದ್ದವರಿಗೆ ಸಚಿವ ಸ್ಥಾನ ಸಿಗುತ್ತದೆ. ನನಗೆ ಸಚಿವ ಸ್ಥಾನ ನೀಡುವ ಕುರಿತು ಮುಖ್ಯಮಂತ್ರಿಗಳು ಹೇಳಬೇಕು ಎಂದರು.