ಹೆಚ್ಚುವರಿ ಮೊಬೈಲ್ ಫಿವರ್ ಕ್ಲಿನಿಕ್ಗಳಿಗೆ ಚಾಲನೆ ನೀಡಲು ಸಾರ್ವಜನಿಕರ ಒತ್ತಾಯ - ಹೆಚ್ಚುವರಿ ಮೊಬೈಲ್ ಫೀವರ್
🎬 Watch Now: Feature Video
ತುಮಕೂರು: ಜಿಲ್ಲೆಯಲ್ಲಿ ಜನನಿಬಿಡ ಪ್ರದೇಶಗಳಿಗೆ ತೆರಳಿ ಕೊರೊನಾ ಶಂಕಿತರ ಪತ್ತೆಗಾಗಿ ಕೋವಿಡ್-19 ಮೊಬೈಲ್ ಫಿವರ್ ಕ್ಲಿನಿಕ್ ಬಸ್ಗೆ ಚಾಲನೆ ನೀಡಲಾಗಿದ್ದು ಎಲ್ಲೆಡೆ ಸಂಚರಿಸುತ್ತಿದೆ. ಇನ್ನೊಂದೆಡೆ ಸರ್ಕಾರಿ ಆಸ್ಪತ್ರೆಗಳನ್ನು ಈಗಾಗಲೇ ಕೋವಿಡ್-19 ಆಸ್ಪತ್ರೆಗಳನ್ನಾಗಿ ಪರಿವರ್ತನೆ ಮಾಡಿದ ನಂತರ ಕೊರೊನಾ ಸೋಂಕಿನ ಗುಣಲಕ್ಷಣಗಳಿರುವ ಜನರು ಮಾತ್ರ ಚಿಕಿತ್ಸೆ ಪಡೆಯುತ್ತಿದ್ದಾರೆ. ಆದರೆ ಸಾಮಾನ್ಯ ಜನರು ಆಸ್ಪತ್ರೆಗೆ ತೆರಳಿ ಚಿಕಿತ್ಸೆ ಪಡೆಯಲು ಹಿಂದೇಟು ಹಾಕುತ್ತಿದ್ದಾರೆ. ಹೀಗಾಗಿ ಹೆಚ್ಚುವರಿಯಾಗಿ ಮೊಬೈಲ್ ಫಿವರ್ ಕ್ಲಿನಿಕ್ ಬಸ್ಗಳನ್ನು ಗ್ರಾಮೀಣ ಪ್ರದೇಶಗಳಿಗೆ ಕಳುಹಿಸಿ ಜನರ ಆರೋಗ್ಯದ ಬಗ್ಗೆ ಹೆಚ್ಚಿನ ಗಮನ ನೀಡಬೇಕೆಂದು ಸಾರ್ವಜನಿಕರು ಒತ್ತಾಯಿಸಿದ್ದಾರೆ.