ಮೋದಿ ಮತ್ತೊಮ್ಮೆ ಪ್ರಧಾನಿ: ಹುಬ್ಬಳ್ಳಿಯಲ್ಲಿ ಅಭಿಮಾನಿಗಳಿಂದ ಸಂಭ್ರಮಾಚರಣೆ - undefined
🎬 Watch Now: Feature Video
ಹುಬ್ಬಳ್ಳಿ: ನರೇಂದ್ರ ಮೋದಿ ಇಂದು ಪ್ರಧಾನಿಯಾಗಿ ಪ್ರಮಾಣವಚನ ಸ್ವೀಕಾರ ಮಾಡಲಿದ್ದಾರೆ. ಈ ಹಿನ್ನೆಲೆ ನಗರದಲ್ಲಿಂದು ಬಿಜೆಪಿ ಕಾರ್ಯಕರ್ತರು ಹಾಗೂ ಮೋದಿ ಅಭಿಮಾನಿಗಳು ವಿಶೇಷ ಪೂಜೆ ಸಲ್ಲಿಸಿದರು. ಸಿದ್ದಾರೂಢ ಮಠಕ್ಕೆ ಭೇಟಿ ನೀಡಿದ್ದ ಬೆಂಬಲಿಗರು, ವಿಶೇಷ ಪೂಜೆ ಸಲ್ಲಿಸಿ ನರೇಂದ್ರ ಮೋದಿಗೆ ಯಶಸ್ಸು ಸಿಗಲಿ ಎಂದು ಪ್ರಾರ್ಥಿಸಿದರು. ನಂತರ ಮೋದಿ ಭಾವಚಿತ್ರಕ್ಕೆ ಮಾಲಾರ್ಪಣೆ ಮಾಡುವ ಮೂಲಕ ಪರಸ್ಪರ ಸಿಹಿ ಹಂಚಿಕೊಂಡು ಸಂಭ್ರಮಿಸಿದರು.