ಕೊಪ್ಪಳದಲ್ಲಿ ಬಿಜೆಪಿ ಅಭ್ಯರ್ಥಿಗಳ ಪರವಾಗಿ ಮತಯಾಚನೆ ಮಾಡಿದ ಪ್ರಧಾನಿ ನರೇಂದ್ರ ಮೋದಿ - modi-samavesh
🎬 Watch Now: Feature Video
ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಕೊಪ್ಪಳದ ಗಂಗಾವತಿಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಬಿಜೆಪಿ ಅಭ್ಯರ್ಥಿಗಳ ಪರವಾಗಿ ಮತಯಾಚನೆ ಮಾಡಿದರು. ಗಂಗಾವತಿಯ ಕನಕಗಿರಿ ರಸ್ತೆಯಲ್ಲಿ ಹಾಕಲಾಗಿದ್ದ ವೇದಿಕೆಗೆ ನರೇಂದ್ರ ಮೋದಿ ಅವರು ಆಗಮಿಸುತ್ತಿದ್ದಂತೆ ಕೊಪ್ಪಳ, ಬಳ್ಳಾರಿ ಹಾಗೂ ರಾಯಚೂರು ಜಿಲ್ಲೆಗಳಿಂದ ಆಗಮಿಸಿದ್ದ ಲಕ್ಷಾಂತರ ಜನರು ಮೋದಿ ಮೋದಿ ಎಂಬ ಘೋಷಣೆ ಹಾಕುವ ಮೂಲಕ ಸ್ವಾಗತಿಸಿದರು. ಅಭಿಮಾನಿಗಳ ಅಭಿಮಾನ ನೋಡಿ ನಿಮ್ಮ ಪ್ರೀತಿಗೆ ನಾನು ಋಣಿಯಾಗಿದ್ದೇನೆ ಎಂದು ಧನ್ಯವಾದ ತಿಳಿಸಿದರು. ಮೋದಿ ಅವರು ತಮ್ಮ ಭಾಷಣವನ್ನು ಕನ್ನಡದಲ್ಲಿ ಆರಂಭಿಸಿದರು. ಕೊಪ್ಪಳದ ಗವಿಮಠದ ಸ್ವಾಮೀಜಿ ಹಾಗೂ ಶ್ರೀಮಠದ ಸಂತ ಪರಂಪರೆಗೆ ನಮಸ್ಕಾರ ಸಲ್ಲಿಸುತ್ತೇನೆ. ಅಲ್ಲದೆ ಕ್ಷೇತ್ರದ ಎಲ್ಲ ದೇವ, ದೇವತೆಗಳಿಗೆ ಪ್ರಣಾಮಗಳು ಎಂದು ಕನ್ನಡದಲ್ಲಿ ಹೇಳಿದರು