ಕೋಲಾರದಲ್ಲಿ ವಿವಿಧ ಕಾಮಗಾರಿಗಳಿಗೆ ಚಾಲನೆ ನೀಡಿದ ಸಂಸದ ಎಸ್. ಮುನಿಸ್ವಾಮಿ - ಕೋಲಾರದಲ್ಲಿ ವಿವಿಧ ಕಾಮಗಾರಿಗಳಿಗೆ ಚಾಲನೆ ಸುದ್ದಿ
🎬 Watch Now: Feature Video

ಇಂದು ಕೋಲಾರದಲ್ಲಿ ಸಂಸದ ಎಸ್.ಮುನಿಸ್ವಾಮಿ ಅವರು ಸುಮಾರು ಮೂರು ಕೋಟಿ ರೂ ಮೌಲ್ಯದ ವಿವಿಧ ಕಾಮಗಾರಿಗಳಿಗೆ ಚಾಲನೆ ನೀಡಿದ್ರು. ನಗರದ ಬಾಲಕರ ಸರ್ಕಾರಿ ಪದವಿ ಪೂರ್ವ ಕಾಲೇಜಿನ ಕಟ್ಟಡ ನಿರ್ಮಾಣ ಕಾಮಗಾರಿಯೊಂದಕ್ಕೆ ಪೂಜೆ ಸಲ್ಲಿಸಿದ್ರು. ಅಲ್ಲದೆ ನಗರದ ನಚಿಕೇತ ಬಾಲಕರ ವಿದ್ಯಾರ್ಥಿ ನಿಲಯದ ದುರಸ್ತಿ ಕಾಮಗಾರಿಗೆ ಚಾಲನೆ ನೀಡಿದ್ರು.ವಿದ್ಯಾರ್ಥಿಗಳ ವಿದ್ಯಾಭ್ಯಾಸಕ್ಕೆ ಯಾವುದೇ ತೊಂದರೆಯಾಗದಂತೆ ಕಟ್ಟಡದ ಮೇಲ್ಛಾವಣಿ, ಕೊಠಡಿಗಳ ದುರಸ್ತಿ, ವಿದ್ಯುತ್ ಸೇರಿದಂತೆ ಇನ್ನಿತರ ಮೂಲಭೂತ ಸಮಸ್ಯೆಗಳನ್ನ ಶೀಘ್ರ ಬಗೆಹರಿಸಬೇಕೆಂದು ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚನೆ ನೀಡಿದ್ರು. ಈ ವೇಳೆ ಕೋಲಾರ ಶಾಸಕ ಕೆ.ಶ್ರೀನಿವಾಸಗೌಡ, ಜಿಲ್ಲಾ ಪಂಚಾಯ್ತಿ ಅಧ್ಯಕ್ಷ ಸಿ.ವೆಂಕಟೇಶ್, ಜಿಲ್ಲಾಧಿಕಾರಿ ಜೆ.ಮಂಜುನಾಥ್ ಸೇರಿದಂತೆ ವಿದ್ಯಾರ್ಥಿಗಳು ಹಾಗೂ ಮುಖಂಡರು ಹಾಜರಿದ್ರು.