ಬಜೆಟ್ ಹಿನ್ನೆಲೆ ಸಿಎಂ ಭೇಟಿಯಾಗಲು ಬಂದಿದ್ದೇನೆ: ಸುಮಲತಾ ಅಂಬರೀಶ್ - ಸಂಸದೆ ಸುಮಲತಾ ಅಂಬರೀಶ್
🎬 Watch Now: Feature Video
ಜಿಲ್ಲೆಯ ಅಭಿವೃದ್ದಿ ಕಾರ್ಯಗಳಿಗೆ ಅನುದಾನ ರಿಲೀಸ್ ಆಗಬೇಕಿತ್ತು. ಅದಕ್ಕೆ ಮುಖ್ಯಮಂತ್ರಿಗಳನ್ನು ಭೇಟಿ ಮಾಡಲು ಬಂದಿದ್ದೇನೆ ಎಂದು ಮಂಡ್ಯ ಸಂಸದೆ, ಹಿರಿಯ ನಟಿ ಸುಮಲತಾ ಅಂಬರೀಶ್ ಅವರು ಹೇಳಿದರು. ವಿಧಾನಸೌಧದಲ್ಲಿ ಇಂದು ಸುದ್ದಿಗಾರರ ಜೊತೆ ಮಾತನಾಡಿದ ಅವರು, ಬಜೆಟ್ ಹಿನ್ನೆಲೆಯಲ್ಲಿ ನಮ್ಮ ಕ್ಷೇತ್ರದ ಅಭಿವೃದ್ಧಿ ಕಾರ್ಯಗಳಿಗೆ ಅನುದಾನ ನೀಡುವಂತೆ ಬೇಡಿಕೆ ಇಡುತ್ತೇನೆ. ಹಾಗಾಗಿ, ಸಚಿವರುಗಳನ್ನ ಭೇಟಿ ಮಾಡಲು ಬಂದಿರುವುದಾಗಿ ತಿಳಿಸಿದರು. ನಂತರ ರಮೇಶ್ ಜಾರಕಿಹೊಳಿ ಸಿಡಿ ಪ್ರಕರಣದ ಬಗ್ಗೆ ಸುದ್ದಿಗಾರರು ಪ್ರಶ್ನೆ ಕೇಳುತ್ತಿದ್ದಂತೆ ಸುಮಲತಾ ಅವರು ಕೈ ಮುಗಿದು ಹೊರಟರು. ಅವರ ಜೊತೆಯಲ್ಲಿ ನಿರ್ಮಾಪಕ ರಾಕ್ಲೈನ್ ವೆಂಕಟೇಶ್ ಸಹ ಇದ್ದರು.