ನಿರ್ವಹಣೆಯಿಲ್ಲದೆ ಶಿಥಿಲಾವಸ್ಥೆ ತಲುಪಿದ ಸಾಂಸ್ಕೃತಿಕ ನಗರಿಯ ಪಾರಂಪರಿಕ ಕಟ್ಟಡಗಳು - ನಿರ್ವಹಣೆಯಿಲ್ಲದೆ ಶಿಥಿಲಾವಸ್ಥೆ ತಲುಪಿದ ಮೈಸೂರಿನ ಕಟ್ಟಡಗಳು
🎬 Watch Now: Feature Video
ಸಾಂಸ್ಕೃತಿಕ ನಗರಿ ಮೈಸೂರಲ್ಲಿ ಪಾರಂಪರಿಕ ಕಟ್ಟಡಗಳು ಸಾಕಷ್ಟಿದ್ದು, ಇವು ವಿವಿಧ ಮಹಾರಾಜರ ಕಾಲದಲ್ಲಿ ನಿರ್ಮಾಣಗೊಂಡಿವೆ. ರಾಜ್ಯ ಸರ್ಕಾರ 2004ರಲ್ಲಿ ಮೈಸೂರನ್ನು ಪಾರಂಪರಿಕ ನಗರಿ ಎಂದು ಘೋಷಣೆ ಮಾಡಿದೆ. ಆದರೆ ಇಲ್ಲಿನ ಕಟ್ಟಡಗಳ ಸರಿಯಾದ ನಿರ್ವಹಣೆ ಇಲ್ಲದೆ ಸಾಕಷ್ಟು ಕಟ್ಟಡಗಳು ಶಿಥಿಲಾವಸ್ಥೆ ತಲುಪಿವೆ.