ದೇಶದಾದ್ಯಂತ ಬ್ಯಾಂಕ್ ಮುಷ್ಕರ: ಬೆಂಗಳೂರಿನಲ್ಲಿ ಬ್ಯಾಂಕ್ ನೌಕರರು ಹೇಳಿದ್ದೇನು!? - Nationwide Bank strike news,
🎬 Watch Now: Feature Video

ರಾಷ್ಟ್ರೀಕೃತ ಬ್ಯಾಂಕ್‌ಗಳ ವಿಲೀನ ಕೈಬಿಡದೇ ಇದ್ದರೆ ಮುಂದಿನ ದಿನಗಳಲ್ಲಿ ಉಗ್ರ ಹೋರಾಟ ಮಾಡೋದಾಗಿ ಬ್ಯಾಂಕ್ ನೌಕರರು ಎಚ್ಚರಿಕೆ ನೀಡಿದ್ದಾರೆ. ಬೆಂಗಳೂರು ನಗರದ ಮಿಲ್ಲರ್ ರಸ್ತೆಯಲ್ಲಿರುವ ಕಾರ್ಪೊರೇಷನ್ ಬ್ಯಾಂಕ್ ಬಳಿ ನೂರಾರು ಬ್ಯಾಂಕ್ ನೌಕರರು ಪ್ರತಿಭಟಿಸಿ ಕೇಂದ್ರ ಸರ್ಕಾರದ ವಿರುದ್ಧ ಕಿಡಿಕಾರಿದ್ದಾರೆ. ಇಂದು ದೇಶಾದ್ಯಂತ ಮುಷ್ಕರಕ್ಕೆ ಕರೆ ನೀಡಿದ್ದು, ಕರ್ನಾಟಕದಲ್ಲೂ ಬೆಂಬಲ ವ್ಯಕ್ತವಾಗಿದೆ. ಪ್ರತಿಭಟನೆ ಸಂಬಂಧ ನಮ್ಮ ಪ್ರತಿನಿಧಿಯೊಂದಿಗೆ ಬ್ಯಾಂಕ್ ನೌಕರರು ತಮ್ಮ ಬೇಡಿಕೆಗಳ ಕುರಿತು ಮಾತನಾಡಿದ್ದಾರೆ.