ಶಿವಕುಮಾರ್ ಪ್ರತಿಕೃತಿ ದಹಿಸಿ ನಾಯಕ ಸಮುದಾಯದ ಪ್ರತಿಭಟನೆ - ನಾಯಕ ಸಮುದಾಯದ ಮುಖಂಡರು
🎬 Watch Now: Feature Video
ಚಾಮರಾಜನಗರ: ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರನ್ನು ಬಂಧಿಸುವಂತೆ ಆಗ್ರಹಿಸಿ ನಾಯಕ ಸಮುದಾಯದ ಮುಖಂಡರು ಡಿಕೆಶಿ ಪ್ರತಿಕೃತಿ ದಹಿಸಿ ನಗರದಲ್ಲಿ ಪ್ರತಿಭಟನೆ ನಡೆಸಿದ್ದಾರೆ. ಸಂತೇಮರಹಳ್ಳಿ ವೃತ್ತದಲ್ಲಿ ಜಮಾಯಿಸಿದ ನಾಯಕ ಸಮುದಾಯದ ಮುಖಂಡರು ಕೆಲಕಾಲ ರಸ್ತೆ ಸಂಚಾರ ತಡೆದು ಶಿವಕುಮಾರ್ ವಿರುದ್ದ ಧಿಕ್ಕಾರ ಕೂಗಿದ್ದಾರೆ. ರಾಜ್ಯದಲ್ಲಿ ಬಿಜೆಪಿ ಸರ್ಕಾರ ಬರಲು ಕಾರಣಕರ್ತರಾದ ರಮೇಶ್ ಜಾರಕಿಹೊಳಿ ಅವರನ್ನು ರಾಜಕೀಯವಾಗಿ ಮುಗಿಸಲು ಡಿಕೆಶಿ ಪರಿಶಿಷ್ಟ ಪಂಗಡದ ಯುವತಿಯನ್ನು ಬಳಸಿಕೊಂಡಿದ್ದಾರೆ ಎಂದು ಆರೋಪಿಸಿದ್ದಾರೆ.