ಡೆಂಗ್ಯೂ ನಿಯಂತ್ರಣಕ್ಕೆ ಅಗತ್ಯ ಕ್ರಮ: ಈ ಟಿವಿ ಭಾರತಕ್ಕೆ ಸಚಿವ ಪ್ರಭು ಚವ್ಹಾಣ್ ಭರವಸೆ - Necessary action for dengue control: Prabhu Chawhan Reaction at Bidar
🎬 Watch Now: Feature Video
![ETV Thumbnail thumbnail](https://etvbharatimages.akamaized.net/etvbharat/prod-images/320-214-4826419-thumbnail-3x2-hrs.jpg)
ಬಸವಕಲ್ಯಾಣ: ಜಿಲ್ಲೆಯಾದ್ಯಂತ ಕಾಣಿಸಿಕೊಂಡಿರುವ ಶಂಕಿತ ಡೆಂಗ್ಯೂ ಜ್ವರ ನಿಯಂತ್ರಣಕ್ಕೆ ಕ್ರಮಕೈಗೊಳ್ಳಲು ಜಿಲ್ಲಾಡಳಿತಕ್ಕೆ ಸೂಚನೆ ನೀಡಲಾಗಿದೆ ಎಂದು ಪಶು ಸಂಗೋಪನೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಪ್ರಭು ಚವ್ಹಾಣ್ ಹೇಳಿದರು. ನಗರದ ಮಿನಿ ವಿಧಾನ ಸೌಧದಲ್ಲಿ ಈಟಿವಿ ಭಾರತದೊಂದಿಗೆ ಮಾತನಾಡಿ, ಬಸವಕಲ್ಯಾಣ ತಾಲೂಕು ಸೇರಿದಂತೆ ಬೀದರ್ ಜಿಲ್ಲೆಯಾದ್ಯಂತ ಶಂಕಿತ ಡೆಂಗ್ಯೂ ಜ್ವರ ಕಾಣಿಸಿಕೊಂಡಿರುವ ಬಗ್ಗೆ ಮಾಹಿತಿ ಇದ್ದು, ಡೆಂಗ್ಯೂ ಜ್ವರ ನಿಯಂತ್ರಣಕ್ಕೆ ತಕ್ಷಣ ಕ್ರಮ ಕೈಗೊಳ್ಳಬೇಕು ಎಂದು ಜಿಲ್ಲಾ ಆರೋಗ್ಯಾಧಿಕಾರಿಗಳಿಗೆ ಸೂಚನೆ ನೀಡಲಾಗಿದೆ ಎಂದರು.