ಹಾವೇರಿ ಜಿಲ್ಲೆಗೆ ವೈದ್ಯಕೀಯ ಕಾಲೇಜು ಮಂಜೂರು: ಕೇಂದ್ರ-ರಾಜ್ಯ ಸರ್ಕಾರಕ್ಕೆ ಶಾಸಕ ಓಲೇಕಾರ್ ಅಭಿನಂದನೆ
🎬 Watch Now: Feature Video
ಹಾವೇರಿ ಜಿಲ್ಲೆಗೆ ವೈದ್ಯಕೀಯ ಕಾಲೇಜ್ ಮಂಜೂರಾಗಿರುವುದಕ್ಕೆ ಹಾವೇರಿ ಶಾಸಕ ನೆಹರು ಓಲೇಕಾರ್ ಕೇಂದ್ರ ಮತ್ತು ರಾಜ್ಯ ಸರ್ಕಾರಕ್ಕೆ ಅಭಿನಂದನೆ ಸಲ್ಲಿಸಿದ್ದಾರೆ. ಹಾವೇರಿಯಲ್ಲಿ ಮಾತನಾಡಿದ ಅವರು ವೈದ್ಯಕೀಯ ಕಾಲೇಜ್ ಬಹಳ ದಿನಗಳ ಬೇಡಿಕೆಯಾಗಿತ್ತು. ಕೊನೆಗೂ ಕೇಂದ್ರ ಮತ್ತು ರಾಜ್ಯ ಸರ್ಕಾರ ಅನುಮತಿ ನೀಡಿದ್ದಕ್ಕೆ ಸಂತಸ ವ್ಯಕ್ತಪಡಿಸಿದರು. ಆದಷ್ಟು ಬೇಗನೆ ಸ್ಥಳ ನಿಗದಿ ಮಾಡಿ ಗುದ್ದಲಿ ಪೂಜೆ ಮಾಡಲಾಗುವುದು. ಕೇಂದ್ರ ಸರ್ಕಾರ ಕಾಲೇಜಿಗೆ 195 ಕೋಟಿ ಮತ್ತು ರಾಜ್ಯ ಸರ್ಕಾರ 135 ಕೋಟಿ ರೂ. ಬಿಡುಗಡೆ ಮಾಡಿವೆ. ಸದ್ಯಕ್ಕೆ ಕೇಂದ್ರ ಸರ್ಕಾರ 60 ಕೋಟಿ ರೂಪಾಯಿ ಬಿಡುಗಡೆ ಮಾಡಿದ್ದು, ಆದಷ್ಟು ಬೇಗ ಕಾಲೇಜ್ ಕಟ್ಟಡ ಕಾರ್ಯ ಆರಂಭಿಸುವ ಇಂಗಿತವನ್ನ ಶಾಸಕ ಓಲೇಕಾರ್ ವ್ಯಕ್ತಪಡಿಸಿದರು.