ಸಿದ್ಧಗಂಗಾ ಮಠಕ್ಕೆ ಭೇಟಿ ನೀಡಿದ ಆಗ್ನೇಯ ಪದವೀಧರ ಕ್ಷೇತ್ರದ ನೂತನ ಶಾಸಕ ಚಿದಾನಂದ್ - ಸಿದ್ಧಗಂಗಾ ಮಠ
🎬 Watch Now: Feature Video
![ETV Thumbnail thumbnail](https://etvbharatimages.akamaized.net/etvbharat/prod-images/320-214-9523698-936-9523698-1605180031081.jpg)
ತುಮಕೂರು ಆಗ್ನೇಯ ಪದವೀಧರ ಕ್ಷೇತ್ರದಲ್ಲಿ ಈ ಬಾರಿ ಸೆಣಸಾಟದೊಂದಿಗೆ ನೂತನ ವಿಧಾನಪರಿಷತ್ ಸದಸ್ಯರಾಗಿ ಆಯ್ಕೆಯಾಗಿರುವ ಬಿಜೆಪಿಯ ಚಿದಾನಂದಗೌಡ ಇಂದು ತುಮಕೂರಿನ ಸಿದ್ದಗಂಗಾ ಮಠಕ್ಕೆ ಭೇಟಿ ನೀಡಿದರು. ಶಿವಕುಮಾರ ಸ್ವಾಮೀಜಿ ಅವರ ಗದ್ದುಗೆ ದರ್ಶನ ಪಡೆದ ಅವರು ಧ್ಯಾನ ಮಂದಿರದಲ್ಲಿ ಕೆಲಕಾಲ ಧ್ಯಾನ ಮಾಡಿದರು. ಇದೇ ವೇಳೆ ಸಿದ್ದಲಿಂಗ ಸ್ವಾಮೀಜಿ ಅವರನ್ನು ಭೇಟಿಯಾಗಿ ಆಶೀರ್ವಾದ ಪಡೆದರು. ಚುನಾವಣೆಯಲ್ಲಿ ಪದವೀಧರರು ಮತ್ತು ಶಿಕ್ಷಕರಿಗೆ ನೀಡಿರುವಂತಹ ಭರವಸೆಗಳನ್ನು ಈಡೇರಿಸುವ ಕುರಿತಂತೆ ಇಂದಿನಿಂದಲೇ ಕಾರ್ಯಕ್ರಮಗಳನ್ನು ರೂಪಿಸಿ ಕೆಲಸ ಮಾಡುವುದಾಗಿ ತಿಳಿಸಿದರು. ತುಮಕೂರು ನಗರ ಶಾಸಕ ಜ್ಯೋತಿ ಗಣೇಶ ಈ ಸಂದರ್ಭದಲ್ಲಿ ಹಾಜರಿದ್ದರು.
Last Updated : Nov 13, 2020, 10:04 AM IST