ರಾಜ್ಯಸಭೆಗೆ ಕಡಾಡಿ, ಗಸ್ತಿ ಅವಿರೋಧ ಆಯ್ಕೆ: ಬಿಜೆಪಿ ಕಚೇರಿಗೆ ಭೇಟಿ ನೀಡಿದ ನೂತನ ಸದಸ್ಯರು - New Rajya Sabha members
🎬 Watch Now: Feature Video

ಬೆಂಗಳೂರು: ರಾಜ್ಯಸಭಾ ಸದಸ್ಯರಾಗಿ ಆಯ್ಕೆಯಾದ ಈರಣ್ಣ ಕಡಾಡಿ ಮತ್ತು ಅಶೋಕ್ ಗಸ್ತಿ ಬಿಜೆಪಿ ರಾಜ್ಯ ಕಚೇರಿ ಜಗನ್ನಾಥ ಭವನಕ್ಕೆ ಭೇಟಿ ನೀಡಿದರು. ಅವಿರೋಧ ಆಯ್ಕೆ ಕುರಿತು ಅಧಿಕೃತ ಘೋಷಣೆ ನಂತರ ಮಲ್ಲೇಶ್ವರಂನಲ್ಲಿರುವ ಪಕ್ಷದ ಕಚೇರಿಗೆ ಮೊದಲ ಬಾರಿಗೆ ಆಗಮಿಸಿದರು. ಭಾರತ ಮಾತೆಯ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡಿದರು. ರಾಜ್ಯ ಪ್ರಧಾನ ಕಾರ್ಯದರ್ಶಿಗಳಾದ ಎನ್.ರವಿಕುಮಾರ್, ಮಹೇಶ್ ಟೆಂಗಿನಕಾಯಿ ಹಾಗೂ ಕಾರ್ಯಾಲಯ ಕಾರ್ಯದರ್ಶಿ ಲೋಕೇಶ್ ಅಂಬೇಕಲ್ಲು, ರಾಜ್ಯಸಭಾ ಸದಸ್ಯರಾಗಿ ಆಯ್ಕೆಯಾದ ಇಬ್ಬರನ್ನೂ ಅಭಿನಂದಿಸಿದರು.