ಡಿಕೆಶಿ ಬಂಧನಕ್ಕೆ ಯಾರು ಕಾರಣ: ಮಾಧ್ಯಮದವರ ಪ್ರಶ್ನೆಗೆ ಕಟೀಲ್ ಮೌನ - ಕಟೀಲ್
🎬 Watch Now: Feature Video
![ETV Thumbnail thumbnail](https://etvbharatimages.akamaized.net/etvbharat/prod-images/320-214-4391166-thumbnail-3x2-katil.jpg)
ಮಾಜಿ ಸಚಿವ ಡಿ ಕೆ ಶಿವಕುಮಾರ್ ಬಂಧನದ ಹಿಂದೆ ಸಿದ್ದರಾಮಯ್ಯ ಕೈವಾಡ ಇದೆ ಎಂದು ಆರೋಪಿಸಿದ್ದ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ಕುಮಾರ್ ಕಟೀಲ್ ಈಗ ದಿಢೀರ್ ಮೌನಕ್ಕೆ ಶರಣಾಗಿದ್ದಾರೆ. ಬೀದರ್ನ ಎಸ್.ಆರ್.ಎಸ್ ಫಂಕ್ಷನ್ ಹಾಲ್ನಲ್ಲಿ ನಡೆದ ಬಿಜೆಪಿ ಕಾರ್ಯಕರ್ತರ ಸಮಾವೇಶದ ಬಳಿಕ ಮಾಧ್ಯಮದವರು ಕಾಣುತ್ತಿದ್ದಂತೆ ಅಂತರ ಕಾಯ್ದುಕೊಂಡರು. ಅಲ್ಲದೆ, ಡಿಕೆಶಿ ಬಂಧನಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯಿಸಲು ನಿರಾಕರಿಸಿದರು. ಮಾಧ್ಯಮ ಪ್ರತಿನಿಧಿಗಳ ಪ್ರಶ್ನೆಗೆ ಯಾವುದೇ ಉತ್ತರ ನೀಡದೇ ಕೈಮುಗಿಯುತ್ತಾ ಕಾರು ಏರಿ ಸ್ಥಳದಿಂದ ತೆರಳಿದರು.