ಮಂಡ್ಯ: ಕೊರೊನಾ ನಿಯಮ ಗಾಳಿಗೆ ತೂರಿ ವ್ಯಾಪಾರ ವಹಿವಾಟು ಮುಂದುವರಿಕೆ - ಮಂಡ್ಯ ಮಾರುಕಟ್ಟೆ ಸುದ್ದಿ
🎬 Watch Now: Feature Video
ಮಂಡ್ಯ: ರಾಜ್ಯದಲ್ಲಿ ಕೊರೊನಾ ಸೋಂಕಿತರ ಪ್ರಕರಣಗಳು ದಿನದಿಂದ ದಿನಕ್ಕೆ ಹೆಚ್ಚಾಗುತ್ತಿವೆ. ಆದರೆ, ನಗರದ ಮಾರುಕಟ್ಟೆ ಆವರಣದಲ್ಲಿ ಜನರು ಮಾಸ್ಕ್ ಧರಿಸದೇ, ಸಾಮಾಜಿಕ ಅಂತರ ಕಾಪಾಡಿಕೊಳ್ಳದೇ ಕೋವಿಡ್ ನಿಯಮ ಗಾಳಿಗೆ ತೂರಿದ್ದಾರೆ. ಸಕ್ಕರೆ ನಾಡಿನ ಮಾರುಕಟ್ಟೆ ಆವರಣದಲ್ಲಿ ವರ್ತಕರು ಮತ್ತು ರೈತರು ಕೋವಿಡ್ ನಿಯಮ ಉಲ್ಲಂಘಿಸಿ ವ್ಯಾಪಾರ ನಡೆಸುತ್ತಿದ್ದಾರೆ. ಸಾರ್ವಜನಿಕರು ಕೂಡ ಸಾಮಾಜಿಕ ಅಂತರ ಕಾಯ್ದುಕೊಳ್ಳದೆ, ಮಾಸ್ಕ್ ಧರಿಸದೆ ವ್ಯವಹಾರ ನಡೆಸುತ್ತಿದ್ದಾರೆ. ಇನ್ನು ಸರ್ಕಾರದ ಆದೇಶವನ್ನು ಅನುಷ್ಠಾನಕ್ಕೆ ತರಬೇಕಾದ ಆರೋಗ್ಯ ಇಲಾಖೆ ಹಾಗೂ ನಗರಸಭೆ ತಲೆಕೆಡಿಸಿಕೊಂಡಿಲ್ಲ. ಜಿಲ್ಲೆಯಲ್ಲಿ ಪ್ರಸ್ತುತ ಸಕ್ರಿಯ ಪ್ರಕರಣಗಳ ಸಂಖ್ಯೆ ಸಾವಿರ ಗಡಿ ದಾಟಿದೆ. ಜಾತ್ರೆ, ಉತ್ಸವ ಸೇರಿದಂತೆ ಇತರೆಡೆ ಜನಜಂಗುಳಿ ಸೇರದಂತೆ ಜಿಲ್ಲಾಧಿಕಾರಿ ಆದೇಶ ಹೊರಡಿಸಿದ್ದಾರೆ. ಆದರೆ, ಮಾರುಕಟ್ಟೆಯಲ್ಲಿ ಈ ಯಾವುದೇ ನಿಯಮಗಳು ಪಾಲನೆ ಆಗಲಿಲ್ಲ. ವ್ಯಾಪಾರಿಗಳು, ಗ್ರಾಹಕರು ಮಾಸ್ಕ್ ಧರಿಸದೇ ಓಡಾಡುತ್ತಿದ್ದರು.