ತುಮಕೂರಿನಲ್ಲಿ ಹೊಸ ವರ್ಷಾಚರಣೆಗೆ ಬ್ರೇಕ್: ಪ್ರವಾಸಿ ತಾಣಗಳಿಗೆ ಸಾರ್ವಜನಿಕರಿಗಿಲ್ಲ ಪ್ರವೇಶ - K. Rakesh Kumar, Tumkur District Collector
🎬 Watch Now: Feature Video
ತುಮಕೂರು: ಜಿಲ್ಲೆಯಲ್ಲಿ ಹೊಸ ವರ್ಷಾಚರಣೆಗೆ ನಿರ್ಬಂಧ ಹೇರಲಾಗಿದ್ದು, ನಾಮದ ಚಿಲುಮೆ, ಬಸದಿ ಬೆಟ್ಟ ಹಾಗೂ ದೇವರಾಯನದುರ್ಗ ಸೇರಿದಂತೆ ಪ್ರವಾಸಿ ತಾಣಗಳಿಗೆ ಬರದಂತೆ ಪ್ರವಾಸಿಗರಿಗೆ ನಿರ್ಬಂಧ ವಿಧಿಸಲಾಗಿದೆ. ಡಿಸೆಂಬರ್ 31ರ ಬೆಳಗ್ಗೆ 8 ಗಂಟೆಯಿಂದ 2021 ಜನವರಿ 2 ರ ಬೆಳಗ್ಗೆ 8 ಗಂಟೆಯವರೆಗೆ ನಿರ್ಬಂಧ ಹಾಕಲಾಗಿದ್ದು, ನಿಯಮ ಉಲ್ಲಂಘಿಸಿದರೆ ಕಾನೂನು ಕ್ರಮಕೈಗೊಳ್ಳಲಾಗುವುದು ಎಂದು ಜಿಲ್ಲಾಧಿಕಾರಿ ಕೆ. ರಾಕೇಶ್ ಕುಮಾರ್ ಹೇಳಿದ್ದಾರೆ.