ಕರ್ನಾಟಕ ಬಂದ್ಗೆ ಕೊಪ್ಪಳದಲ್ಲಿಲ್ಲ ಬೆಂಬಲ
🎬 Watch Now: Feature Video
ಕೊಪ್ಪಳ: ಡಾ. ಸರೋಜಿನಿ ಮಹಿಷಿ ವರದಿ ಜಾರಿಗೆ ಆಗ್ರಹಿಸಿ ಇಂದು ಕರೆ ನೀಡಲಾಗಿರುವ ಕರ್ನಾಟಕ ಬಂದ್ ಕರೆಗೆ ಕೊಪ್ಪಳದಲ್ಲಿ ಬೆಂಬಲ ವ್ಯಕ್ತವಾಗಿಲ್ಲ. ನಗರದಲ್ಲಿ ಎಂದಿನಂತೆ ಸಹಜ ಜನ ಜೀವನ ಪ್ರಾರಂಭವಾಗಿದ್ದು, ಸರ್ಕಾರಿ ಮತ್ತು ಖಾಸಗಿ ಬಸ್ಗಳು ಎಂದಿನಂತೆ ರಸ್ತೆಗಿಳಿದಿವೆ. ಅಂಗಡಿ-ಮುಂಗಟ್ಟುಗಳು, ಶಾಲಾ ಕಾಲೇಜುಗಳು ಎಂದಿನಂತೆ ತೆರೆಯುತ್ತಿವೆ. ಜಿಲ್ಲೆಯಲ್ಲಿ ಕರ್ನಾಟಕ ಜನದರ್ಶನ ಎಂಬ ಒಂದು ಸಂಘಟನೆ ಮಾತ್ರ ಬೆಳಗ್ಗೆ 10 ಗಂಟೆಯ ಬಳಿಕ ಪ್ರತಿಭಟನೆ ನಡೆಸಿ ಮನವಿ ಸಲ್ಲಿಸಲಿದೆ. ಈ ಕುರಿತ ಪ್ರತ್ಯಕ್ಷ ವರದಿ ಇಲ್ಲಿದೆ ನೋಡಿ..