ಡಿಕೆಶಿ ಬಂಧನ ಖಂಡಿಸಿ ಪ್ರತಿಭಟಿಸಿದರೆ ಪ್ರಯೋಜನವಿಲ್ಲ: ಸಂಸದ ವಿ.ಶ್ರೀನಿವಾಸ ಪ್ರಸಾದ್ - ದ್ವೇಷವಿಲ್ಲ
🎬 Watch Now: Feature Video
ಡಿ.ಕೆ.ಶಿವಕುಮಾರ್ ಬಂಧನಕ್ಕೂ ಬಿಜೆಪಿಗೂ ಯಾವುದೇ ಸಂಬಂಧವಿಲ್ಲ, ನಮಗೆ ಅವರ ಬಗ್ಗೆ ದ್ವೇಷವಿಲ್ಲ ಎಂದು ಸಂಸದ ವಿ.ಶ್ರೀನಿವಾಸ ಪ್ರಸಾದ್ ಹೇಳಿದ್ದಾರೆ. ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಡಿಕೆಶಿ ಬಂಧನದಿಂದ ರಾಜಕಾರಣ ಮಾಡಬೇಕಾದ ಅಗತ್ಯವೂ ನಮಗಿಲ್ಲ. ಡಿಕೆಶಿ ಬಂಧನ ಖಂಡಿಸಿ ಪ್ರತಿಭಟನೆ ಮಾಡಿದರೆ ಪ್ರಯೋಜನವಿಲ್ಲ, ಕಾನೂನಿಗಿಂತ ಯಾರೂ ದೊಡ್ಡವರಿಲ್ಲ, ದೇಶದಲ್ಲಿ ಕಾನೂನು ಎಲ್ಲರಿಗೂ ಒಂದೇ ಎಂದು ಅವರು ತಿಳಿಸಿದರು.