ಅಥಣಿಯಲ್ಲಿ ಲಕ್ಷ್ಮಣ ಸವದಿ ನೇತೃತ್ವದ ಚುನಾವಣೆಯಲ್ಲಿ ಗೆಲುವು ನನ್ನದೇ: ಮಹೇಶ್ ಕುಮಠಳ್ಳಿ ವಿಶ್ವಾಸ - ಅನರ್ಹ ಶಾಸಕರ ಕ್ಷೇತ್ರಗಳಿಗೆ ಉಪಚುನಾವಣೆ
🎬 Watch Now: Feature Video
![ETV Thumbnail thumbnail](https://etvbharatimages.akamaized.net/etvbharat/prod-images/320-214-5106564-thumbnail-3x2-hvish.jpg)
ಅಥಣಿ ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಮಹೇಶ್ ಕುಮಠಳ್ಳಿ ಸೋಮವಾರ ನಾಮಪತ್ರ ಸಲ್ಲಿಸಿದರು. ನಂತರ 'ಈಟಿವಿ ಭಾರತ್' ಜೊತೆ ಮಾತನಾಡಿದ ಅವರು, ಮತದಾರ ಬಾಂಧವರು ನನ್ನನ್ನು ಬಿಜೆಪಿ ಅಭ್ಯರ್ಥಿಯಾಗಿ ಗೆಲ್ಲಿಸುತ್ತಾರೆ. ಅದರಲ್ಲಿ ಎರಡು ಮಾತಿಲ್ಲ. ನಮ್ಮಲ್ಲಿ ಮತ್ತು ಮೂಲ ಬಿಜೆಪಿ ನಡುವೆ ಯಾವುದೇ ಭಿನ್ನಾಭಿಪ್ರಾಯವಿಲ್ಲ. ಲಕ್ಷ್ಮಣ್ ಸವದಿ ನೇತೃತ್ವದಲ್ಲಿ ಚುನಾವಣೆ ನಡೆಯುತ್ತಿರುವುದರಿಂದ ನನ್ನನ್ನು ಭಾರೀ ಮತಗಳ ಅಂತರದಿಂದ ಗೆಲ್ಲಿಸುತ್ತಾರೆ ಎಂದು ಹೇಳಿದರು.