ಪುಲ್ವಾಮ ದಾಳಿಯಲ್ಲಿ ಹುತಾತ್ಮರಾದ ಯೋಧರಿಗೆ ರಾಜ್ಯದ ಹಲವೆಡೆ ಶ್ರದ್ಧಾಂಜಲಿ - ಮೇಣದ ಬತ್ತಿಗಳನ್ನು ಬೆಳಗಿ ಶ್ರದ್ಧಾಂಜಲಿ
🎬 Watch Now: Feature Video
![ETV Thumbnail thumbnail](https://etvbharatimages.akamaized.net/etvbharat/prod-images/320-214-6076168-thumbnail-3x2-ghsgd.jpg)
ದಾವಣಗೆರೆ/ಕೊಪ್ಪಳ: ಕಳೆದ ವರ್ಷ ಪುಲ್ವಾಮದಲ್ಲಿ ನಡೆದ ದಾಳಿಯಲ್ಲಿ ಹುತಾತ್ಮರಾದ ಯೋಧರಿಗೆ ರಾಜ್ಯದ ಹಲವೆಡೆ ಶ್ರದ್ಧಾಂಜಲಿ ಸಲ್ಲಿಸಲಾಯಿತು. ಕೊಪ್ಪಳದ ನಗರದ ಗಂಜ್ ಸರ್ಕಲ್‌ನಲ್ಲಿ ವಿಶ್ವ ಹಿಂದು ಪರಿಷತ್ ವತಿಯಿಂದ ಕಾರ್ಯಕರ್ತರು ಮೇಣದ ಬತ್ತಿಗಳನ್ನು ಬೆಳಗಿ ಹಾಗೂ ಎರಡು ನಿಮಿಷ ಮೌನಾಚರಣೆ ಮಾಡುವ ಮೂಲಕ ಹುತಾತ್ಮ ಯೋಧರ ಆತ್ಮಕ್ಕೆ ಶಾಂತಿಕೋರಿದರು. ಇನ್ನು ದಾವಣಗೆರೆಯ ಜಯದೇವ ವೃತ್ತದಲ್ಲಿ ಹಿಂದೂ ಜಾಗರಣ ವೇದಿಕೆಯ ನೇತೃತ್ವದಲ್ಲಿ ಶ್ರದ್ಧಾಂಜಲಿ ಅರ್ಪಿಸಲಾಯಿತು.