ಎನ್‌ಆರ್‌ಸಿ-ಸಿಎಎ ಕಾಯ್ದೆಗೆ ವಿರೋಧ:ಸಾಮೂಹಿಕ ಪ್ರಾರ್ಥನೆ,ಸಹಿ ಅಭಿಯಾನ! - Mass Prayer and Signature Campaign by Muslim Community
🎬 Watch Now: Feature Video

ಎನ್‌ಆರ್‌ಸಿ ಹಾಗೂ ಸಿಎಎ ಕಾಯ್ದೆ ವಿರೋಧಿಸಿ ಮುಸ್ಲಿಂ ಬಾಂಧವರು ಧಾರವಾಡದಲ್ಲಿ ಸಾಮೂಹಿಕ ಪ್ರಾರ್ಥನೆ ಹಾಗೂ ಸಹಿ ಅಭಿಯಾನ ನಡೆಸಿದರು. ಧಾರವಾಡ ಅಂಜುಮನ್ ಇಸ್ಲಾಂ ಸಂಸ್ಥೆಯಿಂದ ನಗರದ ಈದ್ಗಾ ಮೈದಾನದಲ್ಲಿ ನಮಾಜ್ ಮಾಡುವ ಮೂಲಕ ಪ್ರಾರ್ಥನೆ ಮಾಡ್ಲಾಯಿತು. ಈದ್ಗಾ ಮೈದಾನದಲ್ಲಿ ಜಮಾಯಿಸಿದ ನೂರಾರು ಮುಸ್ಲಿಂ ಬಾಂಧವರು ಕೇಂದ್ರ ಸರ್ಕಾರ ಜಾರಿಗೆ ತಂದಿರುವ ಎನ್‌ಆರ್‌ಸಿ ಹಾಗೂ ಸಿಎಎ ಕಾಯ್ದೆಗೆ ವಿರೋಧ ವ್ಯಕ್ತಪಡಿಸಿದರು. ಪ್ರಾರ್ಥನೆ ಹಾಗೂ ಸಹಿ ಸಂಗ್ರಹ ಅಭಿಯಾನದಲ್ಲಿ ಮಾಜಿ ಸಂಸದ ಹಿಂಡಸಗೇರಿ, ಅಂಜುಮನ್ ಸಂಸ್ಥೆ ಅಧ್ಯಕ್ಷ ಇಸ್ಮಾಯಿಲ್ ತಮಟಗಾರ ನೇತೃತ್ವದಲ್ಲಿ ಪ್ರಾರ್ಥನೆ ಸಲ್ಲಿಸಲಾಯ್ತು. ಇದರಲ್ಲಿ ನೂರಾರು ಮುಸ್ಲಿಂ ಬಾಂಧವರು ಭಾಗಿಯಾಗಿ ಕಾಯ್ದೆಗೆ ವಿರೋಧ ವ್ಯಕ್ತಪಡಿಸಿದರು.