ತುಂಬಿ ಹರಿಯುತ್ತಿರುವ ಶಿಂಷಾ ನದಿ... ಜನತೆಗೆ ಮಂಡ್ಯ ಜಿಲ್ಲಾಡಳಿತದಿಂದ ಮುನ್ನೆಚ್ಚರಿಕೆ - Shimsha River
🎬 Watch Now: Feature Video
ಮಂಡ್ಯ: ಮಳೆಯಿಂದಾಗಿ ಶಿಂಷಾ ನದಿ ತುಂಬಿ ಹರಿಯುತ್ತಿದ್ದು, ಜಿಲ್ಲಾಡಳಿತ ನದಿ ಪಾತ್ರದ ಜನರಿಗೆ ಪ್ರವಾಹದ ಮುನ್ನೆಚ್ಚರಿಕೆ ನೀಡಿದೆ. ದಶಕಗಳ ನಂತರ ಶಿಂಷಾ ನದಿ ತುಂಬಿ ಹರಿಯುತ್ತಿದ್ದು, ರೈತರ ಮೊಗದಲ್ಲಿ ಮಂದಹಾಸ ಮೂಡಿಸಿದೆ. ತುಮಕೂರು ಜಿಲ್ಲೆಯಲ್ಲಿ ಉತ್ತಮ ಮಳೆಯಾಗುತ್ತಿರುವ ಹಿನ್ನೆಲೆ, ನದಿಯಲ್ಲಿ ಹೆಚ್ಚಿನ ನೀರು ಬಂದಿದೆ. ಮಾರ್ಕೋನಹಳ್ಳಿ ಡ್ಯಾಮ್‌ನಿಂದಲೂ ನದಿಗೆ ನೀರು ಹರಿಸಲಾಗುತ್ತಿದ್ದು, ನದಿ ತೀರಕ್ಕೆ ಜನ ಸುಳಿಯದಂತೆ ಸೂಚಿಸಲಾಗಿದೆ. ನದಿಗೆ ಇನ್ನೂ ಒಳ ಹರಿವು ಹೆಚ್ಚಾಗುವ ಸಾಧ್ಯತೆಯಿದ್ದು, ಶಿಂಷಾ ನದಿ ವ್ಯಾಪ್ತಿಯಲ್ಲಿ ಪೊಲೀಸರನ್ನು ನಿಯೋಜಿಸಲಾಗಿದೆ. ತುರ್ತು ಪರಿಸ್ಥಿತಿ ನಿಭಾಯಿಸಲು ಜಿಲ್ಲಾಡಳಿತ ಸಕಲ ಸಿದ್ಧತೆ ಮಾಡಿಕೊಂಡಿದೆ.