ಸಂಚಾರಿ ಪೊಲೀಸ್ ಠಾಣೆಗೆ ಪೆಡಲ್ ಪ್ರೆಸ್ ಹ್ಯಾಂಡ್ ವಾಶ್ ವಿತರಣೆ
🎬 Watch Now: Feature Video
ಕೊರೊನಾ ವೈರಸ್ ಭೀತಿಯ ಹಿನ್ನೆಲೆಯಲ್ಲಿ ಲಾಕ್‌ಡೌನ್ ಘೋಷಣೆ ಮಾಡಲಾಗಿದೆ. ಇಂತಹ ಸಂದಿಗ್ಧ ಪರಿಸ್ಥಿತಿಯಲ್ಲಿಯೂ ಕೂಡ ಕಾರ್ಯನಿರ್ವಹಿಸುತ್ತಿರುವ ಸಂಚಾರಿ ಪೊಲೀಸ್ ಠಾಣೆಯ ಸಿಬ್ಬಂದಿಗೆ ಉಪಯುಕ್ತವಾಗಲು ನವಯುಗ ಯೂತ್ ಅಸೋಸಿಯೇಷನ್ ವತಿಯಿಂದ ಹುಬ್ಬಳಿಯ ಪೂರ್ವ ಸಂಚಾರ ಪೊಲೀಸ್ ಠಾಣೆಗೆ 'ಪೆಡಲ್ ಪ್ರೆಸ್ ಹ್ಯಾಂಡ್ ವಾಷ್' ವಿತರಿಸಲಾಯಿತು. ಸಂಸ್ಥೆಯ ಅಧ್ಯಕ್ಷರಾದ ಸಿದ್ದರಾಜ್ ಎಂ ಎಸ್ ನೇತೃತ್ವದಲ್ಲಿ ವಿತರಣೆ ಮಾಡಿ ಸಂಚಾರಿ ಪೊಲೀಸ್ ಸಿಬ್ಬಂದಿ ಆರೋಗ್ಯದ ಬಗ್ಗೆ ಕಾಳಜಿ ವಹಿಸಲಾಯಿತು.