ಮಾರುಕಟ್ಟೆಯಲ್ಲಿ ಅಗತ್ಯ ವಸ್ತುಗಳ ಬೆಲೆ ಏರಿಕೆ ಖಂಡಿಸಿ ಡಿಸಿಗೆ ಮನವಿ - ಕರ್ನಾಟಕ ರಾಜ್ಯಾದ್ಯಂತ ನಿಷೇಧಾಜ್ಞೆ ಘೋಷಣೆ
🎬 Watch Now: Feature Video
ಶಿವಮೊಗ್ಗ: ಕರ್ನಾಟಕ ರಾಜ್ಯಾದ್ಯಂತ ನಿಷೇಧಾಜ್ಞೆ ಘೋಷಣೆ ಮಾಡಿರುವ ಹಿನ್ನೆಲೆ ಶಿವಮೊಗ್ಗ ನಗರದಲ್ಲಿ ನಾಗರಿಕರಿಗೆ ಬೇಕಾಗಿರುವ ಅಗತ್ಯ ವಸ್ತುಗಳ ದರವನ್ನು ನಿಗದಿ ಪಡಿಸುವಂತೆ ಆಗ್ರಹಿಸಿ ಶಿವಮೊಗ್ಗ ಮಹಾನಗರ ಪಾಲಿಕೆಯ ಕಾಂಗ್ರೆಸ್ ಸದಸ್ಯರು ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಿದರು. ತರಕಾರಿ ಮಾರುಕಟ್ಟೆಗಳಲ್ಲಿ ಸಾರ್ವಜನಿಕರಿಗೆ ಬೇಕಾದ ತರಕಾರಿಗಳನ್ನು ದುಪ್ಪಟ್ಟು ಬೆಲೆಗೆ ಮಾರಾಟ ಮಾಡಲಾಗುತ್ತಿದೆ. ಇದರಿಂದ ಗ್ರಾಹಕರಿಗೆ ಹೊರೆಯಾಗುತ್ತಿದೆ ಹಾಗಾಗಿ ಜಿಲ್ಲಾಡಳಿತ ಅಗತ್ಯ ವಸ್ತುಗಳ ದರವನ್ನು ನಿಗದಿಪಡಿಸಬೇಕೆಂದು ಆಗ್ರಹಿಸಿದರು.