ಮಾರುಕಟ್ಟೆಯಲ್ಲಿ ಸಾಮಾಜಿಕ ಅಂತರ ಕಾಯ್ದುಕೊಳ್ಳದ ಜನ: ಪೊಲೀಸರಿಗೆ ಹೆಚ್ಚಾದ ತಲೆನೋವು
🎬 Watch Now: Feature Video
ಹಾವೇರಿ: ಕೊರೊನಾ ತಡೆಗಾಗಿ ಸಾಮಾಜಿಕ ಅಂತರ ಕಾಯ್ದುಕೊಳ್ಳಿ ಎಂದು ಎಷ್ಟೇ ಹೇಳಿದ್ರೂ ಕೂಡ ಅದ್ರು ಬಗ್ಗೆ ಹಾವೇರಿ ಜನ ಕಿಂಚಿತ್ತೂ ತಲೆ ಕೆಡಿಸಿಕೊಳ್ಳದೇ ಮಾರುಕಟ್ಟೆಯಲ್ಲಿ ಗುಂಪು ಗುಂಪಾಗಿ ನಿಂತು ಭರ್ಜರಿ ವ್ಯಾಪಾರ ನಡೆಸಿದ್ದಾರೆ. ನಗರದ ಎಪಿಎಂಸಿ ಮಾರುಕಟ್ಟೆಯಲ್ಲಿ ಸಾರ್ವಜನಿಕರು ಸಾಮಾಜಿಕ ಅಂತರ ಕಾಯ್ದುಕೊಂಡು ವ್ಯಾಪಾರ ಮಾಡುವಂತೆ ಜಿಲ್ಲಾಡಳಿತ ಅವಕಾಶ ನೀಡಿದೆ. ಆದರೆ ವ್ಯಾಪಾರಸ್ಥರು ಹಾಗೂ ಖರೀದಿದಾರು ಯಾವುದೇ ಮುಂಜಾಗ್ರತಾ ಕ್ರಮ ಕೈಗೊಳ್ಳದೇ ಜಿಲ್ಲಾಡಳಿತದ ರೂಲ್ಸ್ ಬ್ರೇಕ್ ಮಾಡಿ ಮಾರುಕಟ್ಟೆಯಲ್ಲಿ ತಿರುಗಾಡುತ್ತಿದ್ದಾರೆ.