ಚಾಮುಂಡಿ ಬೆಟ್ಟದಲ್ಲಿ ಪಾಲನೆಯಾಗುತ್ತಿವೆ ಕೋವಿಡ್ ನಿಯಮಗಳು - ಕೋವಿಡ್ ನಿಯಮ ಪಾಲನೆ
🎬 Watch Now: Feature Video
ಮೈಸೂರು: ಕೋವಿಡ್ನ ಎಲ್ಲ ಸುರಕ್ಷತಾ ಕ್ರಮಗಳನ್ನು ಚಾಮುಂಡಿ ಬೆಟ್ಟದಲ್ಲಿ ಅನುಸರಿಸಲಾಗುತ್ತಿದೆ ಎಂದು ಮುಖ್ಯ ಆಡಳಿತಾಧಿಕಾರಿ ತಿಳಿಸಿದ್ದಾರೆ. ಈಟಿವಿ ಭಾರತದೊಂದಿಗೆ ಚಾಮುಂಡಿ ಬೆಟ್ಟದ ಮುಖ್ಯ ಆಡಳಿತಾಧಿಕಾರಿ ಯತೀರಾಜ್ ಮಾತನಾಡಿ, ಕೋವಿಡ್ ಎರಡನೇ ಅಲೆ ಹೆಚ್ಚಾದ ಹಿನ್ನೆಲೆ ಹಾಗೂ ಸಾರಿಗೆ ನೌಕರರ ಮುಷ್ಕರದ ಹಿನ್ನೆಲೆ ಭಕ್ತರ ಸಂಖ್ಯೆ ಕೊಂಚ ಕಡಿಮೆಯಾಗಿದೆ. ದೇವಾಲಯಕ್ಕೆ ಬರುವ ಭಕ್ತರಿಗೆ ಸ್ಯಾನಿಟೈಸರ್ ಬಳಸುವಿಕೆ, ಸಾಮಾಜಿಕ ಅಂತರ ಕಾಪಾಡುವಿಕೆ, ಮಾಸ್ಕ್ ಧರಿಸುವಿಕೆಯನ್ನು ಕಡ್ಡಾಯ ಮಾಡಲಾಗಿದ್ದು, ಆ ಕುರಿತು ತಿಳಿಸಲಾಗಿದೆ. ಮಾಸ್ಕ್ ಇಲ್ಲದವರಿಗೆ ದೇವಾಲಯ ಪ್ರವೇಶವನ್ನು ನಿಷೇಧಿಸಲಾಗಿದೆ. ದೇವಾಲಯದ ಒಳಗಡೆ ಸಾಮಾಜಿಕ ಅಂತರ ಪಾಲಿಸಲಾಗುತ್ತಿದ್ದು, ಸರ್ಕಾರದ ಆದೇಶದಂತೆ ಎಲ್ಲ ಕೋವಿಡ್ ನಿಯಮಗಳನ್ನು ಪಾಲಿಸಲಾಗುತ್ತಿದೆ ಎಂದು ತಿಳಿಸಿದರು.