ಮಳೆ ಆತಂಕ: ಮುಂಜಾಗ್ರತೆಯಾಗಿ ಗಂಟು-ಮೂಟೆ ಕಟ್ಟುತ್ತಿದ್ದಾರೆ ಸೂಕ್ಷ್ಮ ಪ್ರದೇಶದ ನಿವಾಸಿಗಳು! - ಕೊಡಗು ಮಳೆ,
🎬 Watch Now: Feature Video
![ETV Thumbnail thumbnail](https://etvbharatimages.akamaized.net/etvbharat/prod-images/320-214-7455926-459-7455926-1591168722532.jpg)
ಕಳೆದ ಎರಡು ವರ್ಷಗಳಿಂದ ಮಳೆಯಿಂದ ಕೊಡಗು ಜಿಲ್ಲೆಯಲ್ಲಿ ಸಂಭವಿಸುತ್ತಿರುವ ಪ್ರವಾಹ ಪರಿಸ್ಥಿತಿ ಸ್ಥಳೀಯರನ್ನು ನಿದ್ದೆಗೆಡಿಸಿದೆ. ಸರ್ಕಾರ ಮತ್ತು ಜಿಲ್ಲಾಡಳಿತ ಆಸ್ತಿ ಹಾಗೂ ಪ್ರಾಣ ಹಾನಿಯನ್ನು ತಡೆಯುವ ಉದ್ದೇಶದಿಂದ ಜಿಲ್ಲಾಡಳಿತ ಮಳೆಗಾಲಕ್ಕೂ ಪೂರ್ವದಲ್ಲಿ ಅತಿ ಸೂಕ್ಷ್ಮ ಪ್ರದೇಶಗಳಲ್ಲಿ ವಾಸಿಸುತ್ತಿರುವ ಮಡಿಕೇರಿಯ ಮಂಗಳಾದೇವಿ ನಗರ, ಚಾಮುಂಡೇಶ್ವರಿ ನಗರ ಹಾಗೂ ಇಂದಿರಾ ನಗರಗಳ ನಿವಾಸಿಗಳಿಗೆ ಸುರಕ್ಷಿತ ಸ್ಥಳಗಳಿಗೆ ತೆರಳುವಂತೆ ನೋಟೀಸ್ ನೀಡಿದೆ. ಆದರೂ ಕೆಲವರು ನಿಯಮಗಳನ್ನು ಪಾಲಿಸುವುದಿಲ್ಲ. ಆದರೆ ಇಂದಿರಾ ನಗರದ ಕೆಲವು ನಿವಾಸಿಗಳು ಮಳೆಗಾಲದ ಅಂತ್ಯದವರೆಗೆ ಮನೆಯಲ್ಲಿನ ವಸ್ತುಗಳನ್ನು ಗಂಟು-ಮೂಟೆ ಕಟ್ಟಿಕೊಂಡು ಖಾಲಿ ಮಾಡಿ ಸುರಕ್ಷಿತ ಪ್ರದೇಶಗಳಿಗೆ ತೆರಳುತ್ತಿದ್ದಾರೆ. ಈ ಬಗ್ಗೆ ಈಟಿವಿ ಭಾರತದೊಂದಿಗೆ ಇಲ್ಲಿನ ನಿವಾಸಿಗಳು ಮಾತನಾಡಿದ್ದಾರೆ.