ಚಿಕ್ಕಬಳ್ಳಾಪುರ: ರಾಷ್ಟ್ರೀಯ ಹೆದ್ದಾರಿ ತಡೆದ ರೈತರ ಬಂಧನ! - ಚಿಕ್ಕಬಳ್ಳಾಪುರ ಲೇಟೆಸ್ಟ್ ನ್ಯೂಸ್
🎬 Watch Now: Feature Video
ಚಿಕ್ಕಬಳ್ಳಾಪುರ: ರಾಷ್ಟ್ರೀಯ ಹೆದ್ದಾರಿಯಲ್ಲಿ ಪ್ರತಿಭಟನೆ ನಡೆಸುತ್ತಿದ್ದ ರೈತರನ್ನು ಪೊಲೀಸರು ಬಂಧಿಸಿದ್ದಾರೆ. ಚಿಕ್ಕಬಳ್ಳಾಪುರ ಹೊರವಲಯದ ರಾಷ್ಟ್ರೀಯ ಹೆದ್ದಾರಿ 07 ರಲ್ಲಿ ಪ್ರಾಂತ ರೈತಸಂಘ ಹಾಗೂ ಪುಟ್ಟಣ್ಣಯ್ಯ ಬಣದ ರೈತ ಸಂಘದ ಕಾರ್ಯಕರ್ತರಿಂದ ಹೆದ್ದಾರಿಯಲ್ಲಿ ಪ್ರತಿಭಟನೆ ನಡೆಸುತ್ತಿದ್ದ ವೇಳೆ ಪೊಲೀಸರು ರೈತರನ್ನು ಬಂಧಿಸಿ ಕರೆದೊಯ್ದಿದ್ದಾರೆ. 50ಕ್ಕೂ ಹೆಚ್ಚು ಪ್ರತಿಭಟನಾಕಾರರನ್ನು ಬಂಧಿಸಿದ್ದು, ಪೊಲೀಸರ ಈ ನಡೆ ಖಂಡಿಸಿ ರೈತ ಸಂಘಟನೆ ಮುಖಂಡರು ಆಕ್ರೋಶ ವ್ಯಕ್ತಪಡಿಸಿದ್ದಾರೆ.