ಜನರ ನಿಗಾಕ್ಕೆ ಡ್ರೋನ್ ಮೊರೆ ಹೋದ ಗುಂಡ್ಲುಪೇಟೆ ಪೊಲೀಸರು - ಗುಂಡ್ಲುಪೇಟೆ ಲೇಟೆಸ್ಟ್ ನ್ಯೂಸ್
🎬 Watch Now: Feature Video

ಗುಂಡ್ಲುಪೇಟೆ: ಪಟ್ಟಣದಲ್ಲಿ ಕೋವಿಡ್ 19ಕ್ಕೆ ಸಂಬಂಧಿಸಿದಂತೆ ಜನಸಂದಣಿ ತಡೆಗಟ್ಟಲು ಪೊಲೀಸ್ ಇಲಾಖೆ ಡ್ರೋನ್ ಮೂಲಕ ಕಾರ್ಯಾಚರಣೆಗೆ ಮುಂದಾಗಿದ್ದು, ಇದಕ್ಕೆ ಜಿಲ್ಲಾಧಿಕಾರಿ ಎಂ.ಆರ್.ರವಿ ಮತ್ತು ಪೊಲೀಸ್ ವರಿಷ್ಠಾಧಿಕಾರಿ ಎಚ್.ಡಿ.ಆನಂದ್ ಕುಮಾರ್ ಚಾಲನೆ ನೀಡಿದರು. ಬಳಿಕ ಮಾತನಾಡಿದ ಜಿಲ್ಲಾಧಿಕಾರಿ, ಸಾರ್ವಜನಿಕರು ಲಾಕ್ಡೌನ್ ಅನ್ನು ಹಗುರವಾಗಿ ಪರಿಗಣಿಸಬಾರದು. ಜಿಲ್ಲಾಡಳಿತ ನೀಡಿರುವ ನಿಯಮಗಳನ್ನು ಶಿಸ್ತು ಬದ್ಧವಾಗಿ ಪಾಲಿಸಬೇಕು. ಸಂಜೆ ಮತ್ತು ಬೆಳಗಿನ ಸಮಯದಲ್ಲಿ ಜನರು ಗುಂಪು ಗುಂಪಾಗಿ ಸಂಚಾರ ಮಾಡುತ್ತಿರುವುದು ಪೊಲೀಸ್ ಇಲಾಖೆ ಗಮನಕ್ಕೆ ಬಂದಿದೆ. ಆದ್ದರಿಂದ ಡ್ರೋನ್ ಸಾರ್ವಜನಿಕರ ಮೇಲೆ ಹದ್ದಿನ ಕಣ್ಣು ಇಡಲಿದೆ ಎಂದು ಎಚ್ಚರಿಕೆ ನೀಡಿದರು.