ಪೊಲೀಸ್ ಧ್ವಜ ದಿನಾಚರಣೆ: ತೆರೆದ ವಾಹನದಲ್ಲಿ ಪರೇಡ್ ವೀಕ್ಷಿಸಿದ ನಿವೃತ್ತ ಪಿಎಸ್ಐ - ಪೊಲೀಸ್ ಇಲಾಖೆಯಲ್ಲಿ ಸೇವೆ ಸಲ್ಲಿಸಿ ನಿವೃತ್ತರಾದ ಅಧಿಕಾರಿ
🎬 Watch Now: Feature Video
![ETV Thumbnail thumbnail](https://etvbharatimages.akamaized.net/etvbharat/prod-images/320-214-11248704-thumbnail-3x2-binn.jpg)
ಕೊಪ್ಪಳ: ಪೊಲೀಸ್ ಇಲಾಖೆಯಲ್ಲಿ ಸೇವೆ ಸಲ್ಲಿಸಿ ನಿವೃತ್ತರಾದ ಅಧಿಕಾರಿ, ಸಿಬ್ಬಂದಿಗಳ ಸೇವೆಯನ್ನು ಸ್ಮರಿಸಿ ಸತ್ಕರಿಸುವ ಉದ್ದೇಶದಿಂದ ಆಚರಿಸಲಾಗುವ ಪೊಲೀಸ್ ಧ್ವಜ ದಿನಾಚರಣೆಯನ್ನು ಕೊಪ್ಪಳದಲ್ಲೂ ಆಚರಿಸಲಾಯಿತು. ನಗರದ ಜಿಲ್ಲಾ ಪೊಲೀಸ್ ಕವಾಯತು ಮೈದಾನದಲ್ಲಿ ನಡೆದ ಪೊಲೀಸ್ ಧ್ವಜ ದಿನಾಚರಣೆ ಕಾರ್ಯಕ್ರಮದಲ್ಲಿ ನಿವೃತ್ತ ಪಿಎಸ್ಐ ಪರಸಪ್ಪ ಅವರು ತೆರೆದ ವಾಹನದಲ್ಲಿ ತೆರಳಿ ಪರೇಡ್ ವೀಕ್ಷಿಸಿದರು. ನಿವೃತ್ತ ಪಿಎಸ್ಐ ಪರಸಪ್ಪ, ನಿವೃತ್ತ ಎಎಸ್ಐ ರಮೇಶ ಪದಕಿ, ನಿವೃತ್ತ ಮುಖ್ಯಪೇದೆ ಸುಂಕಪ್ಪ ಅವರನ್ನು ಮುಖ್ಯ ಅತಿಥಿಗಳನ್ನಾಗಿ ಕಾರ್ಯಕ್ರಮಕ್ಕೆ ಆಹ್ವಾನಿಸಿ ಗೌರವಿಸಲಾಯಿತು. ಆಕರ್ಷಕ ಪಥಸಂಚಲನದ ಮೂಲಕ ನಿವೃತ್ತ ಪೊಲೀಸ್ ಅಧಿಕಾರಿ, ಸಿಬ್ಬಂದಿಗಳಿಗೆ ಗೌರವ ವಂದನೆ ಸಲ್ಲಿಸಲಾಯಿತು. ಈ ಸಂದರ್ಭದಲ್ಲಿ ಮಾತನಾಡಿದ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಟಿ. ಶ್ರೀಧರ್ ಅವರು, ಪ್ರತಿ ವರ್ಷ ಏಪ್ರಿಲ್ 2 ರಂದು ಪೊಲೀಸ್ ಧ್ವಜ ದಿನಾಚರಣೆ ಆಚರಿಸಲಾಗುತ್ತಿದೆ. ಪೊಲೀಸ್ ಧ್ವಜ ಮಾರಾಟದಿಂದ ಬಂದ ಹಣವನ್ನು ನಿವೃತ್ತ ಪೊಲೀಸ್ ಅಧಿಕಾರಿ, ಸಿಬ್ಬಂದಿಗಳ ಆರೋಗ್ಯ, ಅವರ ಮಕ್ಕಳ ಶಿಕ್ಷಣಕ್ಕಾಗಿ ವಿನಿಯೋಗಿಸಲಾಗುತ್ತದೆ ಎಂದರು.