ವಿಜಯಪುರ: ಪೊಲೀಸ್ ಶಿಕ್ಷಣಾರ್ಥಿಗಳ ನಿರ್ಗಮನ ಪಥಸಂಚಲನ - ಪೊಲೀಸ್ ಶಿಕ್ಷಣಾರ್ಥಿಗಳ ನಿರ್ಗಮನ ಪಥಸಂಚಲನ
🎬 Watch Now: Feature Video
![ETV Thumbnail thumbnail](https://etvbharatimages.akamaized.net/etvbharat/prod-images/320-214-11027649-thumbnail-3x2-dgfnmrjkg.jpg)
ವಿಜಯಪುರ: ನಗರದ ಪೊಲೀಸ್ ಕವಾಯತ್ ಮೈದಾನದಲ್ಲಿಂದು 5ನೇ ತಂಡದ ಸಶಸ್ತ್ರ ಪೊಲೀಸ್ ಕಾನ್ಸ್ಟೇಬಲ್ ಪ್ರಶಿಕ್ಷಣಾರ್ಥಿಗಳ ಮತ್ತು 1ನೇ ತಂಡದ ಕಾರಾಗೃಹ ವೀಕ್ಷಕ ಪ್ರಶಿಕ್ಷಣಾರ್ಥಿಗಳ ನಿರ್ಗಮನ ಪಥಸಂಚಲನ ನಡೆಯಿತು. ಪ್ರಶಿಕ್ಷಣಾರ್ಥಿಗಳು ತರಬೇತಿ ಮುಗಿದು ಕರ್ತವ್ಯಕ್ಕೆ ಹಾಜರಾಗುವ ಮುನ್ನ ಆಕರ್ಷಕ ಪಥಸಂಚಲನ ನಡೆಸಿದರು. ನಂತರ ಐಜಿಪಿ ರಾಘವೇಂದ್ರ ಸುಹಾಸ್ ಧ್ವಜ ವಂದನೆ ಸ್ವೀಕರಿಸಿದರು. ಮುಖ್ಯ ಅತಿಥಿಗಳಾಗಿ ಉತ್ತರ ವಲಯ ಐಜಿಪಿ ರಾಘವೇಂದ್ರ ಸುಹಾಸ್, ವಿಜಯಪುರ ಹಾಗೂ ಬಾಗಲಕೋಟೆ ಜಿಲ್ಲಾ ಎಸ್ಪಿಗಳು ಉಪಸ್ಥಿತರಿದ್ದರು.