ಅಕ್ರಮವಾಗಿ ಕಟ್ಟಿ ಹಾಕಿದ್ದ 11 ಜಾನುವಾರಗಳ ರಕ್ಷಣೆ ಮಾಡಿದ ಪೊಲೀಸರು!
🎬 Watch Now: Feature Video
ಕಾರವಾರ: ನಿರ್ಮಾಣ ಹಂತದ ಕಟ್ಟಡದ ಬಳಿ ಅಕ್ರಮವಾಗಿ ಕಟ್ಟಿ ಹಾಕಲಾಗಿದ್ದ 11 ಜಾನುವಾರುಗಳನ್ನು ಪೊಲೀಸರು ರಕ್ಷಣೆ ಮಾಡಿರುವ ಘಟನೆ ಹೊನ್ನಾವರ ತಾಲೂಕಿನ ಮಂಕಿ ಗ್ರಾಮದ ಹಳೆ ಮಠದ ಬಳಿ ನಡೆದಿದೆ. ನಿರ್ಮಾಣ ಹಂತದ ಕಟ್ಟಡದ ಹಿಂಭಾಗದ ಖಾಲಿ ಜಾಗದಲ್ಲಿ ಒಟ್ಟು 11 ಎತ್ತುಗಳನ್ನು ಮರಗಳಿಗೆ ಕಟ್ಟಿಹಾಕಲಾಗಿದೆ. ಆಹಾರವನ್ನು ನೀಡದೆ ಮಳೆಯಲ್ಲಿಯೇ ಕಟ್ಟಿ ಹಾಕಿದ್ದು, ಈ ಬಗ್ಗೆ ಮಾಹಿತಿ ಪಡೆದು ಸ್ಥಳಕ್ಕೆ ತೆರಳಿದ ಪೊಲೀಸರು ಜಾನುವಾರುಗಳನ್ನು ರಕ್ಷಣೆ ಮಾಡಿದ್ದಾರೆ. ಎತ್ತುಗಳನ್ನು ಕಳ್ಳತನ ಮಾಡಿ ಕಟ್ಟಿ ಹಾಕಿರುವ ಶಂಕೆ ವ್ಯಕ್ತವಾಗಿದ್ದು, ಹಲವರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಲಾಗುತ್ತಿದೆ. ಈ ಬಗ್ಗೆ ಮಂಕಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.