ಸಿಎಂ ಉದಾಸಿ ವಿದಾಯಕ್ಕೆ ಕಂಬನಿ ಮಿಡಿದ ರಾಜಕೀಯ ಗಣ್ಯರು
🎬 Watch Now: Feature Video
ಆರು ಬಾರಿ ಚುನಾವಣೆಯಲ್ಲಿ ಗೆದ್ದು, 5 ದಶಕಗಳ ಕಾಲ ರಾಜಕೀಯದಲ್ಲಿ ಸಕ್ರಿಯರಾಗಿದ್ದ ಹಾನಗಲ್ ಶಾಸಕ ಸಿ ಎಂ ಉದಾಸಿ ಇಹಲೋಕ ತ್ಯಜಿಸಿದ್ದಾರೆ. ಪುರಸಭೆ ಅಧ್ಯಕ್ಷನಾಗಿ ರಾಜಕೀಯ ಜೀವನ ಪ್ರಾರಂಭಿಸಿದ ಇವರು, ಸಚಿವನಾಗಿ ರಾಜ್ಯ ರಾಜಕೀಯದಲ್ಲಿ ತಮ್ಮದೇ ಆದ ಚಾಪು ಮೂಡಿಸಿದ್ದಾರೆ. ಅಲ್ಲದೇ ಉದಾಸಿ ನಿಧನಕ್ಕೆ ಪಕ್ಷ ಬೇಧ ಮರೆತು ಎಲ್ಲಾ ರಾಜಕೀಯ ನಾಯಕರು ಸಂತಾಪ ಸೂಚಿಸಿ ಕಂಬನಿ ಮಿಡಿದಿದ್ದು ವಿಶೇಷವಾಗಿದೆ.