ಸಖರಾಯಪಟ್ಟಣಕ್ಕೆ ಆಗಮಿಸಿದ ಧರ್ಮೇಗೌಡರ ಪಾರ್ಥಿವ ಶರೀರ: ಗಣ್ಯರಿಂದ ಅಂತಿಮ ದರ್ಶನ - ಧರ್ಮೇಗೌಡರ ಅಂತಿಮ ದರ್ಶನ ಪಡೆದ ಗಣ್ಯರು
🎬 Watch Now: Feature Video

ಚಿಕ್ಕಮಗಳೂರು: ಇಂದು ನಿಧನರಾದ ವಿಧಾನಪರಿಷತ್ ಉಪಸಭಾಪತಿ ಎಸ್.ಎಲ್ ಧರ್ಮೇಗೌಡರ ಪಾರ್ಥಿವ ಶರೀರ ಸಖರಾಯಪಟ್ಟಣಕ್ಕೆ ಆಗಮಿಸಿದ್ದು, ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ. ರವಿ, ಸಚಿವ ಮಾಧುಸ್ವಾಮಿ, ಶಾಸಕರಾದ ರಾಜೇಗೌಡ, ಎಂ.ಪಿ ಕುಮಾರಸ್ವಾಮಿ, ಬೆಳ್ಳಿ ಪ್ರಕಾಶ್, ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್, ವಿಧಾನಪರಿಷತ್ ಸದಸ್ಯ ಬಸವರಾಜ್ ಹೊರಟ್ಟಿ ಸೇರಿದಂತೆ ಹಲವು ನಾಯಕರು ಅಂತಿಮ ದರ್ಶನ ಪಡೆದರು. ಸಾರ್ವಜನಿಕರಿಗೆ ಅಂತಿಮ ದರ್ಶನ ಪಡೆಯಲು ಸರ್ಕಾರಿ ಕಾಲೇಜು ಆವರಣದಲ್ಲಿ ವ್ಯವಸ್ಥೆ ಮಾಡಲಾಗಿದೆ.